ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 539 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಖಚಿತಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 17 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 239 ಜನರಿಗೆ ಕೊರೊನಾ ದೃಢಪಟ್ಟಿದೆ. 7 ಜನರು ನಿಧನರಾಗಿದ್ದಾರೆ.
ಪ್ರಸ್ತುತ ಕರ್ನಾಟಕದಲ್ಲಿ 12,565 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 591 ಜನರು ಕೊವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಬುಧವಾರ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.48ರಷ್ಟಿದೆ.
ಈವರೆಗೆ ಕರ್ನಾಟಕದಲ್ಲಿ 29,24,693 ಜನರು ಕೊವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ. ಒಟ್ಟು 37,780 ಜನರು ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 239, ದಕ್ಷಿಣ ಕನ್ನಡ 75, ಕೊಡಗು 36, ಮೈಸೂರು 31, ತುಮಕೂರು 22, ಹಾಸನ 21, ಉತ್ತರ ಕನ್ನಡ 19 ಜನರಿಗೆ ಕೊವಿಡ್ ದೃಢಪಟ್ಟಿದೆ.
ಇಂದಿನ 29/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/fM2UCpURI6@CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/w5zbRlEDIe
— K’taka Health Dept (@DHFWKA) September 29, 2021
Umesh Reddy Profile: ಯಾರೀತ ಉಮೇಶ್ ರೆಡ್ಡಿ? ಈತನ ಹೆಸರು ಕೇಳಿದರೆ ಜನರೇಕೆ ಭಯ ಪಡುತ್ತಿದ್ದರು?
ZyCov-D Vaccine: ಅ.2ರಂದು ಭಾರತಕ್ಕೆ ಮತ್ತೊಂದು ಕೊವಿಡ್ ಲಸಿಕೆ ಲಭ್ಯ; ಜೈಕೋವ್-ಡಿ ಬೆಲೆ ನಿಗದಿ ಬಗ್ಗೆ ಚರ್ಚೆ