Covid-19 Karnataka Update: ಕರ್ನಾಟಕದಲ್ಲಿ 9579 ಮಂದಿಗೆ ಕೊರೊನಾ ಸೋಂಕು, 52 ಮಂದಿ ಸಾವು

ಕರ್ನಾಟಕ ರಾಜ್ಯದಲ್ಲಿ ಸೋಮವಾರ ಒಟ್ಟು 9,579 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 52 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಸಂಖ್ಯೆಯ ಕೊರೊನಾ ಸೋಂಕು ಮತ್ತು ಸಾವು ಪ್ರಕರಣಗಳು ವರದಿಯಾಗಿವೆ.

  • TV9 Web Team
  • Published On - 18:44 PM, 12 Apr 2021
Covid-19 Karnataka Update: ಕರ್ನಾಟಕದಲ್ಲಿ 9579 ಮಂದಿಗೆ ಕೊರೊನಾ ಸೋಂಕು, 52 ಮಂದಿ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ ಒಟ್ಟು 9,579 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 10,74,869ಕ್ಕೆ (10.74 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 52 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾದಿಂದ 12,941 ಮಂದಿ ಮೃತಪಟ್ಟಿದ್ದಾರೆ. ಗುಣಮುಖರಾಗಿ ಡಿಸ್​ಚಾರ್ಜ್ ಆದವರ ಒಟ್ಟು ಸಂಖ್ಯೆ 9,85,924 (9.85 ಲಕ್ಷ). ರಾಜ್ಯದ ವಿವಿಧೆಡೆ ಪ್ರಸ್ತುತ 75,985 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಗಳೂರಿನಲ್ಲಿ ಇಂದು ಒಂದೇ ದಿನ 6,387 ಜನರಿಗೆ ಸೋಂಕು ದೃಢಪಟ್ಟಿದೆ. 40 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,88,369ಕ್ಕೆ (4.88 ಲಕ್ಷ) ಏರಿಕೆಯಾಗಿದೆ. ಈ ಪೈಕಿ 4,26,968 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,855 ಜನರು ಸಾವನ್ನಪ್ಪಿದ್ದಾರೆ. 56,545 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು
ರಾಜ್ಯದಲ್ಲಿಂದು ಹೊಸದಾಗಿ 9,579 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 6387 ಪ್ರಕರಣಗಳು ವರದಿಯಾಗಿವೆ. ನಂತರದ ಸ್ಥಾನದಲ್ಲಿ ಬೀದರ್ ಇದೆ. ಬೀದರ್ ಜಿಲ್ಲೆಯಲ್ಲಿ 465 ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ ಮೈಸೂರು 362, ಕಲಬುರ್ಗಿ 335, ತುಮಕೂರು 239, ಬೆಂಗಳೂರು ಗ್ರಾಮಾಂತರ ಜಿಲ್ಲೆ 192, ಬಳ್ಳಾರಿ 132, ವಿಜಯಪುರ 122, ಚಿಕ್ಕಬಳ್ಳಾಪುರ 120, ಹಾಸನ 113, ಉಡುಪಿ 101 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಮೂರಂಕಿ ದಾಟಿದೆ.

ಕೋಲಾರ 96, ಧಾರವಾಡ 91, ಮಂಡ್ಯ 86, ದಕ್ಷಿಣ ಕನ್ನಡ 73, ರಾಯಚೂರು 70, ರಾಮನಗರ 64, ಉತ್ತರ ಕನ್ನಡ 64, ಚಿಕ್ಕಮಗಳೂರು 57, ಬಾಗಲಕೋಟೆ 55, ಯಾದಗಿರಿ 52, ಶಿವಮೊಗ್ಗ 43, ದಾವಣಗೆರೆ 40, ಬೆಳಗಾವಿ 39, ಚಾಮರಾಜನಗರ 39, ಹಾವೇರಿ 36, ಕೊಪ್ಪಳ 31, ಗದಗ 29, ಕೊಡಗು 24, ಚಿತ್ರದುರ್ಗ 22 ಪ್ರಕರಣಗಳು ದೃಢಪಟ್ಟಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು?
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 52 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು (40) ಸಂಖ್ಯೆಯ ಸಾವು ಸಂಭವಿಸಿದೆ. ಉಳಿದಂತೆ ಮೈಸೂರು ಜಿಲ್ಲೆಯಲ್ಲಿ ಮೂವರು, ಬೀದರ್, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ತಲಾ ಒಬ್ಬರು ಬಲಿಯಾಗಿದ್ದಾರೆ.

(Karnataka Covid-19 update 9579 people died from coronavirus infection)

ಇದನ್ನೂ ಓದಿ: Sputnik V: ಸ್ಪುಟ್ನಿಕ್ ವಿ ಕೊರೊನಾ ಲಸಿಕೆ ಭಾರತದಲ್ಲಿ ಬಳಸಲು ತಜ್ಞರ ಒಪ್ಪಿಗೆ

ಇದನ್ನೂ ಓದಿ: ಕೊವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಮಾತ್ರ ಸಾಕಾಗುವುದಿಲ್ಲ; ಹೊಸ ರೂಪಾಂತರಿ ವೈರಸ್ ಆಟವೇ ಬೇರೆ