Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 3082 ಮಂದಿಗೆ ಪಾಸಿಟಿವ್, 14 ಸಾವು, ಕಳೆದ 5 ತಿಂಗಳಲ್ಲೇ ಗರಿಷ್ಠ

ರಾಜ್ಯದಲ್ಲಿ ಕಳೆದ ನವೆಂಬರ್ 6ರ ನಂತರ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ, ಅಂದರೆ 3000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿರಲಿಲ್ಲ. ಕಳೆದ ಮೂರು ದಿನಗಳಿಂದಲೂ ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಸತತವಾಗಿ 2500 ದಾಟುತ್ತಿದೆ.

Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 3082 ಮಂದಿಗೆ ಪಾಸಿಟಿವ್, 14 ಸಾವು, ಕಳೆದ 5 ತಿಂಗಳಲ್ಲೇ ಗರಿಷ್ಠ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 28, 2021 | 9:23 PM

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ (ಮಾರ್ಚ್ 28) 3,082 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ ನವೆಂಬರ್ 6ರ ನಂತರ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ, ಅಂದರೆ 3000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಪ್ರಕರಣಗಳು ವರದಿಯಾಗಿರಲಿಲ್ಲ. ಕಳೆದ ಮೂರು ದಿನಗಳಿಂದಲೂ ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಸತತವಾಗಿ 2500 ದಾಟುತ್ತಿದೆ. ಗುರುವಾರ 2523, ಶುಕ್ರವಾರ 2566 ಮತ್ತು ಶನಿವಾರ 2886 ಪ್ರಕರಣಗಳು ವರದಿಯಾಗಿದ್ದವು. ಭಾನುವಾರ 3082 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ಮುಟ್ಟಿದೆ.

ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ ಇಂದು 14 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,504ಕ್ಕೆ ಮುಟ್ಟಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಪೈಕಿ 9,51,452 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 23,037 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 2,004 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,28,173ಕ್ಕೆ ಏರಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಈವರೆಗೆ ಕೊರೊನಾದಿಂದ 4,581 ಮಂದಿ ಮೃತಪಟ್ಟಿದ್ದಾರೆ.

ಅತಿಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ದೇಶದ ಮೊದಲ 10 ಜಿಲ್ಲೆಗಳಲ್ಲಿ ಬೇಂಗಳೂರು ನಗರ ಜಿಲ್ಲೆಯ ಹೆಸರೂ ಸೇರ್ಪಡೆಯಾಗಿದೆ. ಒಟ್ಟು ಸೋಂಕು ಪ್ರಕರಣಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳದ ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ದೇಶದ ಒಟ್ಟು ಸೋಂಕು ಪ್ರಕರಣಗಳಲ್ಲಿ ಶೇ 79.57ರಷ್ಟು ವರದಿಯಾಗುವ ಮೊದಲ ಆರು ರಾಜ್ಯಗಳಲ್ಲಿ ಕರ್ನಾಟಕವೂ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ಘೋಷಿಸಿತ್ತು. ‘ಮಹಾರಾಷ್ಟ್ರ, ಪಂಜಾಬ್, ಛತ್ತೀಸಗಡ, ಕರ್ನಾಟಕ, ಗುಜರಾತ್ ಮತ್ತು ಮಧ್ಯಪ್ರದೇಶಗಳಿಂದ ದೇಶದ ಶೇ 79.57ರಷ್ಟು ಹೊಸ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ’ ಎಂದು ಕೇಂದ್ರ ಸರ್ಕಾರ ಹೇಳಿತ್ತು.

45 ವರ್ಷ ದಾಟಿದವರಿಗೆ ಸೋಂಕು ನಿರೋಧಕ ಲಸಿಕೆ ನೀಡಲು ಆದ್ಯತೆ ನೀಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಮಕ್ಕಳಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಮಾರ್ಚ್​ 1ರಿಂದ 26ರ ಮಧ್ಯೆ 10 ವರ್ಷಕ್ಕೂ ಕಡಿಮೆ ವಯೋಮಾನದ 470 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 244 ಬಾಲಕರು ಮತ್ತು 228 ಬಾಲಕಿಯರು.

ರಾಜ್ಯದಲ್ಲಿ ಕೊವಿಡ್ 2ನೇ ಅಲೆ ಕರ್ನಾಟಕದಲ್ಲಿ ಕೊರೊನಾ ಸೋಂಕಿನ 2ನೇ ಆಲೆ ಆರಂಭವಾಗಿದೆ. ಜನರ ಚಟುವಟಿಕೆಗಳನ್ನು ನಿರ್ಬಂಧಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದರು. ರಾಜ್ಯ ಸರ್ಕಾರವು ಲಾಕ್​ಡೌನ್ ಸಾಧ್ಯತೆಯನ್ನು ತಳ್ಳಿಹಾಕಿದೆ. ಮಾಸ್ಕ್ ಧರಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜನರಲ್ಲಿ ವಿನಂತಿಸಿದೆ.

ಪ್ರವೇಶ ನಿರ್ಬಂಧ ಭಾರತದ ಯಾವುದೇ ರಾಜ್ಯದಿಂದ ಕರ್ನಾಟಕ ಪ್ರವೇಶಿಸುವವರು ಏಪ್ರಿಲ್ 1ರಿಂದ ಆರ್​ಟಿಪಿಸಿಆರ್​ ನೆಗೆಟಿವ್ ಹೊಂದಿರುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ಮತ್ತೆ ‘ಕ್ವಾರಂಟೈನ್ ವಾಚ್’ ಆ್ಯಪ್ ಬಳಕೆ ಬೆಂಗಳೂರಿನಲ್ಲಿ 20ರಿಂದ 40ರ ವಯೋಮಾನದವರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಂಡುಬರುತ್ತಿದೆ. ಐಸೊಲೇಶನ್ (ಪ್ರತ್ಯೇಕವಾಸ) ಮತ್ತು ಕ್ವಾರಂಟೈನ್ ನಿಯಮಗಳು ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಕ್ವಾರಂಟೈನ್ ವಾಚ್ ಆ್ಯಪ್ ಬಳಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೋಂ ಕ್ವಾರಂಟೈನ್​ಗೆ ಸಲಹೆ ಮಾಡಲ್ಪಟ್ಟ ವ್ಯಕ್ತಿಯು ಪ್ರತಿದಿನ ಆ್ಯಪ್ ಮೂಲಕ ಸೆಲ್ಫಿ ಅಪ್​ಲೋಡ್​ ಮಾಡಬೇಕಾತ್ತದೆ.

ಮೈಸೂರು ಜಿಲ್ಲೆಯಲ್ಲಿ 114 ಮಂದಿಗೆ ಸೋಂಕು ಮೈಸೂರು ಜಿಲ್ಲೆಯಲ್ಲಿ ಇಂದು 114 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55,447ಕ್ಕೇರಿಕೆಯಾಗಿದೆ. 583 ಸೋಂಕಿತರಿಗೆ ನಿಗದಿತ ಕೊವಿಡ್​ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 1,049 ಜನರು ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 115 ಮಂದಿಗೆ ಸೋಂಕು ಉಡುಪಿ ಜಿಲ್ಲೆಯಲ್ಲಿ 115 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್ನಲ್ಲಿ ಒಂದೇ ದಿನ 70 ಪ್ರಕರಣಗಳು ಪತ್ತೆಯಾಗಿವೆ. ಎಂಐಟಿ ಕ್ಯಾಂಪಸ್​ ಸೋಂಕಿತರ ಸಂಖ್ಯೆ 902ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ 2ನೇ ಅಲೆ: ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಧಾರ್ಮಿಕ ಉತ್ಸವಕ್ಕೆ ನಿರ್ಬಂಧ​

ಇದನ್ನೂ ಓದಿ: World Coronavirus Update: ಬ್ರೆಜಿಲ್​ನಲ್ಲಿ ಹೆಚ್ಚಿದ ಕೊವಿಡ್ ಸೋಂಕು; ಮೂರು ಲಕ್ಷಕ್ಕೆ ತಲುಪಿದ ಮೃತರ ಸಂಖ್ಯೆ

ಇದನ್ನೂ ಓದಿ: Coronavirus Case in India: ದೇಶದಲ್ಲಿ ಕೊವಿಡ್​ನಿಂದ ಒಂದೇ ದಿನ 312 ಸಾವು, 62,714 ಹೊಸ ಪ್ರಕರಣ ಪತ್ತೆ

Published On - 9:15 pm, Sun, 28 March 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ