ಜ. 10ರಿಂದ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್​ ಡೋಸ್, ಆಸ್ಪತ್ರೆಗಳಲ್ಲಿ ವಿಐಪಿಗಳ ಪ್ರಭಾವ ನಡೆಯುವುದಿಲ್ಲ; ಸಚಿವ ಡಾ. ಸುಧಾಕರ್

Covid Cases in Karnataka: ಈ ಹಿಂದೆ ಹೋಂ ಐಸೋಲೇಷನ್ ಅನ್ನು 10 ದಿನಗಳಿಗೆ ನಿಗದಿ ಮಾಡಲಾಗಿತ್ತು. ಇದೀಗ ಆ ಅವಧಿಯನ್ನು 7 ದಿನಗಳಿಗೆ ಇಳಿಸಲಾಗಿದೆ. ಆಸ್ಪತ್ರೆಗಳಲ್ಲಿ ವಿಐಪಿಗಳು ಪ್ರಭಾವ ಬೀರಿ ಹೋಗಿ ದಾಖಲಾಗುವಂತಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಜ. 10ರಿಂದ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್​ ಡೋಸ್, ಆಸ್ಪತ್ರೆಗಳಲ್ಲಿ ವಿಐಪಿಗಳ ಪ್ರಭಾವ ನಡೆಯುವುದಿಲ್ಲ; ಸಚಿವ ಡಾ. ಸುಧಾಕರ್
ಡಾ. ಕೆ ಸುಧಾಕರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 07, 2022 | 3:42 PM

ಬೆಂಗಳೂರು: ಭಾರತದಲ್ಲಿ 150 ಡೋಸ್​ ಕೊವಿಡ್ ಲಸಿಕೆಯನ್ನು ವಿತರಿಸುವ ಮೂಲಕ ಮೈಲುಗಲ್ಲನ್ನು ತಲುಪಿದೆ. ಶೇ. 90ರಷ್ಟು ಕೊರೊನಾ ಪ್ರಕರಣಗಳು ಬೆಂಗಳೂರು ವ್ಯಾಪ್ತಿಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಹೆಚ್ಚು ಎಚ್ಚರ ವಹಿಸಲಾಗಿದೆ. ಜ. 10ರಿಂದ 60 ವರ್ಷದ ಮೇಲ್ಪಟ್ಟವರಿಗೆ ಬೂಸ್ಟರ್​​ ಡೋಸ್​ ನೀಡಲಾಗುವುದು. ಕೊವಿಡ್​ ವಾರಿಯರ್ಸ್, ಹೆಲ್ತ್ ವರ್ಕರ್ಸ್​ಗೆ ಬೂಸ್ಟರ್​ ಡೋಸ್​ ನೀಡಲಾಗುವುದು. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್​ ಕಡ್ಡಾಯಗೊಳಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ. ಚಿಕಿತ್ಸೆಯ ಅಗತ್ಯವಿರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಿ, ಅನಗತ್ಯವಾಗಿ ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳು ಪ್ರಭಾವ ಬೀರಿ ಆಸ್ಪತ್ರೆಗೆ ದಾಖಲಾಗಬಾರದು  ಎಂದು ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

ಕೊವಿಡ್​ ನಿಯಂತ್ರಣಕ್ಕೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ರಾಜ್ಯಮಟ್ಟದಲ್ಲಿ ಸಮನ್ವಯ ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೇರೆ ರಾಜ್ಯ, ದೇಶಗಳಿಂದ ವಿಮಾನದಲ್ಲಿ ಆಗಮಿಸುವವರ ಮೇಲೆ ಯಾವ ರೀತಿಯಲ್ಲಿ ನಿಗಾ ಇಡುತ್ತಿದ್ದೇವೋ ಅದೇ ರೀತಿ ಬೇರೆ ರಾಜ್ಯಗಳಿಂದ ರೈಲುಗಳಲ್ಲಿ ಬರುವವರ ಮೇಲೂ ನಿಗಾ ಇಡಲಾಗುತ್ತಿದೆ. ರಾಜ್ಯದ ಗಡಿಗಳ ಚೆಕ್​ಪೋಸ್ಟ್​ನಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್​ ಕಡ್ಡಾಯಗೊಳಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ. 72 ಗಂಟೆ ಮೊದಲಿನ ಆರ್​ಟಿಪಿಸಿಆರ್​ ರಿಪೋರ್ಟ್​ ಕಡ್ಡಾಯಗೊಳಿಸಲು ಮನವಿ ಮಾಡಲಾಗಿದೆ ಎಂದು ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಮೈಕ್ರೋ ಕಂಟೇನ್ಮೇಂಟ್ ಝೋನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಕೇಸುಗಳು ಹೆಚ್ಚಾಗಿರುವುದರಿಂದ ಬೆಂಗಳೂರಿನಲ್ಲಿ ವಾರ್ ರೂಂ ತೆರೆಯಲಾಗುತ್ತಿದೆ. ಬೆಂಗಳೂರಿನ 8 ಜೋನ್​ನಲ್ಲಿಯೂ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಯಾವುದೇ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಕೂಡಲೇ ಕಮಾಂಡ್​ ಸೆಂಟರ್​ನಿಂದ ಹೆಲ್ಪ್​ಲೈನ್ ಮೂಲಕ ಅವರಿಗೆ ಫೋನ್ ಮಾಡಿ ಅವರು ಕೈಗೊಳ್ಳಬೇಕಾದ ಕ್ರಮಗಳು, ಕ್ವಾರಂಟೈನ್ ರೂಲ್, ಚಿಕಿತ್ಸೆಯ ಮಾಹಿತಿ ನೀಡಲಾಗುವುದು. ಇದಕ್ಕಾಗಿ 10 ಸಾವಿರ ಹೌಸ್​ ಸರ್ಜನ್​ಗಳನ್ನು ಬಳಸಿಕೊಳ್ಳಲಾಗುವುದು ಎಂದು ವಿಧಾನಸೌಧದಲ್ಲಿ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಹೆಚ್ಚಿನ ರೋಗಿಗಳಿಗೆ ಕೊರೊನಾ ಲಕ್ಷಣಗಳೇ ಇರುವುದಿಲ್ಲ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯ ಇರುವುದಿಲ್ಲ. ಯಾರಿಗೆ ನಿಜವಾಗಿಯೂ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯವಿದೆಯೋ ಅವರನ್ನು ಮಾತ್ರ ದಾಖಲು ಮಾಡಲಾಗುವುದು. ಈ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು. ಜನರಿಗೆ ಸೂಕ್ತ ‌ಮಾಹಿತಿ ನೀಡಲು ವೈದ್ಯರನ್ನು ಅಧಿಕೃತ ವಕ್ತಾರರನ್ನಾಗಿ ಮಾಡುತ್ತೇವೆ. ಮಾಧ್ಯಮದಲ್ಲಿ ಕೂಡಾ ಈ ಅಧಿಕೃತ ವಕ್ತಾರರಿಂದಲೇ ಮಾಹಿತಿಯನ್ನು ಪಡೆದು ‌ಸುದ್ದಿ ಪ್ರಸಾರ ಮಾಡಬೇಕು ಎಂದು ಮನವಿ ಮಾಡುತ್ತೇವೆ. ಕೊವಿಡ್ 3ನೇ ಅಲೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೇವೆ ಎಂಬ ಆತ್ಮವಿಶ್ವಾಸ ನಮಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಈ ಹಿಂದೆ ಹೋಂ ಐಸೋಲೇಷನ್ ಅನ್ನು 10 ದಿನಗಳಿಗೆ ನಿಗದಿ ಮಾಡಲಾಗಿತ್ತು. ಇದೀಗ ಆ ಅವಧಿಯನ್ನು 7 ದಿನಗಳಿಗೆ ಇಳಿಸಲಾಗಿದೆ. ರಾಜಕಾರಣಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳು, ಗಣ್ಯರು, ಅಧಿಕಾರಿಗಳು ಅನಗತ್ಯವಾಗಿ ಆಸ್ಪತ್ರೆಗೆ ಹೋಗಿ ದಾಖಲಾಗಬಾರದು. ಆಸ್ಪತ್ರೆಯ ಬೆಡ್​ಗಳನ್ನು ರೋಗದ ಲಕ್ಷಣವಿರುವ ಹಾಗೂ ಚಿಕಿತ್ಸೆಯ ಅಗತ್ಯವಿರುವವರಿಗೆ ಮಾತ್ರ ನೀಡಲಾಗುತ್ತದೆ. ಆಸ್ಪತ್ರೆಗಳಲ್ಲಿ ವಿಐಪಿಗಳು ಪ್ರಭಾವ ಬೀರಿ ಹೋಗಿ ದಾಖಲಾಗುವಂತಿಲ್ಲ. ಸರ್ಕಾರದ ಮಾರ್ಗಸೂಚಿ ಆಧಾರದಲ್ಲೇ ಅವರು ದಾಖಲಾಗಬೇಕು. ಯಾವುದೇ ಆಸ್ಪತ್ರೆ ವಿಐಪಿಗಳಿಗೆ ಪ್ರಭಾವದಿಂದ ದಾಖಲು ಮಾಡಿಕೊಂಡರೆ ಆಸ್ಪತ್ರೆ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಟೆಸ್ಟ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ನಿನ್ನೆ ತಿಳಿಸಿರುವಂತೆ ಒಮಿಕ್ರಾನ್ ರೂಪಾಂತರಿ ಇಡೀ ಜಗತ್ತಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಹಿಂದೆ ಕಾಣಿಸಿಕೊಂಡಿದ್ದ ಡೆಲ್ಟಾ ರೂಪಾಂತರಿಯಷ್ಟು ಈ ಒಮಿಕ್ರಾನ್ ಸೋಂಕು ತೀವ್ರಗತಿಯಲ್ಲದಿದ್ದರೂ ಅದನ್ನು ಮಂದಗತಿಯ ವೈರಸ್ ಎಂದು ಹೇಳಲು ಸಾಧ್ಯವಿಲ್ಲ. ಈಗಾಗಲೇ ಎರಡು ಡೋಸ್ ಕೊವಿಡ್ ಲಸಿಕೆ ತೆಗೆದುಕೊಂಡವರಿಗೆ ಈ ಒಮಿಕ್ರಾನ್ ವೈರಸ್​ನಿಂದ ತೀವ್ರವಾದ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಹೀಗಾಗಿ, ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ನಿಯಮಗಳನ್ನು ಸರಿಯಾಗಿ ಪಾಲಿಸಿ ಎಂದು ಡಾ. ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ಜುಲೈ ವೇಳೆಗೆ ಪ್ರತಿ ದೇಶದಲ್ಲಿ ಶೇ. 70ರಷ್ಟಾದರೂ ಕೊರೊನಾ ಲಸಿಕೆಗಳನ್ನು ಹಾಕಿರಬೇಕು ಎಂದು ಹೇಳಿದೆ. ಕರ್ನಾಟಕದಲ್ಲಿ ಈಗಾಗಲೇ ಇದುವರೆಗೆ ಶೇ. 99ರಷ್ಟು ಮೊದಲ ಡೋಸ್ ಕೊಟ್ಟಿದ್ದೇವೆ. ಶೇ. 80ರಷ್ಟು ಜನರಿಗೆ ಎರಡೂ ಡೋಸ್​ ಲಸಿಕೆಗಳನ್ನು ನೀಡಲಾಗಿದೆ. ಆದರೆ, ವಿಪರ್ಯಾಸವೆಂದರೆ 109 ದೇಶಗಳಲ್ಲಿ ಜುಲೈ ವೇಳೆಗೆ ಶೇ. 70ರಷ್ಟು ಕೊರೊನಾ ಲಸಿಕೆ ವಿತರಿಸಲು ಸಾಧ್ಯವಿಲ್ಲ. 36 ದೇಶಗಳಲ್ಲಿ ಶೇ. 10ರಷ್ಟು ಕೂಡ ಕೊರೊನಾ ಲಸಿಕೆಗಳನ್ನು ನೀಡಿಲ್ಲ. ಈ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತ್ಯಂತ ವೇಗವಾಗಿ ಕೊರೊನಾ ಲಸಿಕೆಗಳನ್ನು ನೀಡಲಾಗುತ್ತಿದೆ. ಕರ್ನಾಟಕವೂ ಈ ನಿಟ್ಟಿನಲ್ಲಿ ಬಹಳ ಮುಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: Omicron Variant: ಹೊಸ ಕೊವಿಡ್ ಪ್ರಕರಣಗಳ ಸುನಾಮಿ ಜಾಗತಿಕ ಆರೋಗ್ಯ ವ್ಯವಸ್ಥೆಗೆ ಅಡ್ಡಿಯಾಗಿದೆ; WHO ಕಳವಳ

Omicron Variant: ಹೊಸ ಕೊವಿಡ್ ಪ್ರಕರಣಗಳ ಸುನಾಮಿ ಜಾಗತಿಕ ಆರೋಗ್ಯ ವ್ಯವಸ್ಥೆಗೆ ಅಡ್ಡಿಯಾಗಿದೆ; WHO ಕಳವಳ

Published On - 3:36 pm, Fri, 7 January 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ