Karnataka Covid Curfew: ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ ಯಾವ ಸಚಿವರಿಗೆ ಯಾವ ಹೊಣೆಗಾರಿಕೆ ನೀಡಿದರು? ಇಲ್ಲಿದೆ ವಿವರ

Karnataka Cabinet Meeting: ಚಾಮರಾಜನಗರದ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ಮಾಧ್ಯಮ ಪ್ರತಿನಿಧಿಗಳಿಗೆ ನಾವೇ ಲಸಿಕೆ ಹಾಕಿಸುತ್ತೇವೆ ಎಂದು ಸಿಎಂ ತಿಳಿಸಿದರು.

Karnataka Covid Curfew: ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ ಯಾವ ಸಚಿವರಿಗೆ ಯಾವ ಹೊಣೆಗಾರಿಕೆ ನೀಡಿದರು? ಇಲ್ಲಿದೆ ವಿವರ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
Follow us
guruganesh bhat
|

Updated on:May 04, 2021 | 8:28 PM

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿ ಕೊವಿಡ್ ಸಂಬಂಧಿತ ಸಮಸ್ಯೆಗಳನ್ನು ಸರಿಪಡಿಸಬೇಕು. ಮೆಡಿಕಲ್ ಆಕ್ಸಿಜನ್ ಸರಬರಾಜು ವ್ಯವಸ್ಥೆಯ ಜವಾಬ್ಧಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ರೆಮ್​ಡೆಸಿವರ್​ ಪೂರೈಕೆ ನಿರ್ವಹಣೆ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ ಸಿ.ಎನ್. ಆಶ್ವತ್ಥನಾರಾಯಣ ಅವರು ವಹಿಸಿಕೊಳ್ಳಲಿದ್ದಾರೆ. ಆಸ್ಪತ್ರೆಗಳಲ್ಲಿನ ಬೆಡ್​ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್​ ನೋಡಿಕೊಳ್ಳಲಿದ್ದಾರೆ. ಹಾಗೇ, ಅರಣ್ಯ ಸಚಿವ ಅರವಿಂದ್ ಲಿಂಬಾವಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೆಲ ಜವಾಬ್ದಾರಿ ಹೊರಿಸಲಾಗಿದೆ. ರಾಜ್ಯದಲ್ಲಿ ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಪರಿಗಣಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

ಚಾಮರಾಜನಗರದ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇನೆ. ದುರಂತದ ಬಗ್ಗೆ 3 ದಿನದಲ್ಲಿ ವರದಿ ನೀಡಲು ಸೂಚಿಸಿದ್ದೇನೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಹಾಗಾಗಿ ಜಿಂದಾಲ್​ ಕಂಪನಿ ಉತ್ಪಾದಿಸುವ ಮೆಡಿಕಲ್  ಆಕ್ಸಿಜನ್​ನ್ನು ನಾವೇ ಬಳಸಿಕೊಳ್ಳುತ್ತೇವೆ. ಈಕುರಿತು  ಕೇಂದ್ರಕ್ಕೆ ಮನವಿ ಮಾಡುತ್ತೇವೆ. ಸಂಸದ ತೇಜಸ್ವಿ ಸೂರ್ಯ ಹಾಸಿಗೆ ಬ್ಲಾಕಿಂಗ್​ ಮಾಡುವ ದಂದೆ ಬಯಲಿಗೆಳೆದಿದ್ದಾರೆ. ಇನ್ನು ಅರ್ಧ ಗಂಟೆಯಲ್ಲಿ ಈ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ವಿವರಿಸಿದರು.

ಮೇ 12ರವರೆಗೂ ಈಗ ಜಾರಿಯಲ್ಲಿರುವ ಕಠಿಣ ನಿಯಮಗಳೇ​ ಜಾರಿಯಲ್ಲಿರುತ್ತವೆ. ಅದಾದ ಬಳಿಕ ಮುಂದಿನದ್ದು ಚರ್ಚಿಸಿ ನಿರ್ಧರಿಸುತ್ತೇವೆ. ಮಾನವ ಸಂಪನ್ಮೂಲವಾಗಿ ಅಂತಿಮ ವರ್ಷದ ಮೆಡಿಕಲ್ ವಿದ್ಯಾರ್ಥಿಗಳನ್ನು ಬಳಸುತ್ತೇವೆ. ಬೆಡ್​ ಬ್ಲಾಕಿಂಗ್​ನಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಸ್ತಾಪಿಸಿದ ಸಿಎಂ ಯಡಿಯೂರಪ್ಪ,  ಸರ್ಕಾರಕ್ಕೆ  ಸಲಹೆಗಳನ್ನು ಕೊಟ್ಟರೆ ಮುಕ್ತವಾಗಿ ಸ್ವೀಕರಿಸುತ್ತೇವೆ ಎಂದರು.

ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿರಬೇಕು ಹಾಗೆ, ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಣಗೊಳಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರ ಹೆಗಲಿಗೇ ಈ ಹೊಣೆ ನೀಡಲಾಗಿದೆ. ನಾಳೆಯಿಂದಲೇ ಜಿಲ್ಲಾ ಉಸ್ತುವರಿ ಸಚಿವರು ಅವರ ಜಿಲ್ಲೆಗಳಿಗೆ ಹೋಗಬೇಕು. ಅಲ್ಲಿಯೇ ಇದ್ದು ಪರಿಸ್ಥಿತಿ ನಿಭಾಯಿಸಬೇಕು. ಈ ಬಗ್ಗೆ ಸಭೆಯಲ್ಲಿ ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

ವೈದ್ಯಕೀಯ, ನರ್ಸಿಂಗ್​ ಅಂತಿಮ ವರ್ಷದ ವಿದ್ಯಾರ್ಥಿಗಳು ಕೊವಿಡ್​ ಚಿಕಿತ್ಸಾ ಕೆಲಸಕ್ಕೆ ನಿಯೋಜನೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ನಿರ್ಧಾರ

Published On - 6:24 pm, Tue, 4 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್