Karnataka Covid Guidelines: ಕರ್ನಾಟಕದಲ್ಲಿ ಹಾಲಿ ಜಾರಿಯಲ್ಲಿರುವ ಕೊವಿಡ್ ಮಾರ್ಗಸೂಚಿ ಅಕ್ಟೋಬರ್ 25ರವರೆಗೆ ವಿಸ್ತರಣೆ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೊವಿಡ್ ಮಾರ್ಗಸೂಚಿಯನ್ನು ಅಕ್ಟೋಬರ್ 25ರವರೆಗೆ ವಿಸ್ತರಣೆಗೊಳಿಸಿದ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

Karnataka Covid Guidelines: ಕರ್ನಾಟಕದಲ್ಲಿ ಹಾಲಿ ಜಾರಿಯಲ್ಲಿರುವ ಕೊವಿಡ್ ಮಾರ್ಗಸೂಚಿ ಅಕ್ಟೋಬರ್ 25ರವರೆಗೆ ವಿಸ್ತರಣೆ
ಲಾಕ್​ಡೌನ್ (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೊವಿಡ್ ಮಾರ್ಗಸೂಚಿಯನ್ನು ಅಕ್ಟೋಬರ್ 25ರವರೆಗೆ ವಿಸ್ತರಣೆಗೊಳಿಸಿದ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 397 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 8) ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,80,170 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,30,867 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,866 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,408 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,970 ಕ್ಕೆ ಏರಿಕೆಯಾಗಿದೆ. 12,47,970 ಸೋಂಕಿತರ ಪೈಕಿ 12,24,237 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,180 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,552 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 140, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 12, ಚಿತ್ರದುರ್ಗ 4, ದಕ್ಷಿಣ ಕನ್ನಡ 39, ದಾವಣಗೆರೆ 2, ಧಾರವಾಡ 6, ಗದಗ 0, ಹಾಸನ 27, ಹಾವೇರಿ 0, ಕಲಬುರಗಿ 1, ಕೊಡಗು 6, ಕೋಲಾರ 4, ಕೊಪ್ಪಳ 0, ಮಂಡ್ಯ 3, ಮೈಸೂರು 53, ರಾಯಚೂರು 0, ರಾಮನಗರ 3, ಶಿವಮೊಗ್ಗ 11, ತುಮಕೂರು 20, ಉಡುಪಿ 23, ಉತ್ತರ ಕನ್ನಡ 23, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: 

ಬೆಕ್ಕಿನ ರಕ್ಷಣೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಧಾರವಾಡದ ಪ್ರಾಣಿಪ್ರೇಮಿ ಸೋಮಶೇಖರ ಚೆನ್ನಶೆಟ್ಟಿ  

ಮಹಾಲಯ ಅಮವಾಸ್ಯೆಯಂದು ಸಮಾಧಿಗಳಿಗಾಗಿ ನೀರಲ್ಲಿಳಿದು ಹುಡುಕಾಡಿದ ಕೋಲಾರದ ಜನರು!

Read Full Article

Click on your DTH Provider to Add TV9 Kannada