Covid 19 Karnataka Update: ಕರ್ನಾಟಕದಲ್ಲಿ 1102 ಮಂದಿಗೆ ಕೊರೊನಾ ಸೋಂಕು, 17 ಸಾವು

ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 0.64 ಇದ್ದರೆ, ಸೋಂಕಿತರ ಸಾವಿನ ಸರಾಸರಿ ಶೇ 1.54 ಇದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,058.

Covid 19 Karnataka Update: ಕರ್ನಾಟಕದಲ್ಲಿ 1102 ಮಂದಿಗೆ ಕೊರೊನಾ ಸೋಂಕು, 17 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 08, 2021 | 10:47 PM

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1102 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. 1458 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ 0.64 ಇದ್ದರೆ, ಸೋಂಕಿತರ ಸಾವಿನ ಸರಾಸರಿ ಶೇ 1.54 ಇದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,058. ರಾಜ್ಯದಲ್ಲಿ ಈವರೆಗೆ 29,58,090 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,03,547 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,458 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 338 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. 277 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಒಟ್ಟು 7119 ಸಕ್ರಿಯ ಪ್ರಕರಣಗಳಿವೆ. ಈವರೆಗೆ 12,40,310 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,17,150 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,040 ಮಂದಿ ಮೃತಪಟ್ಟಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 338, ದಕ್ಷಿಣ ಕನ್ನಡ 200, ಉಡುಪಿ 133, ಮೈಸೂರು 64, ಶಿವಮೊಗ್ಗ 55, ಚಿಕ್ಕಮಗಳೂರು, ಹಾಸನ 51, ಉತ್ತರ ಕನ್ನಡ 40, ಕೊಡಗು 33, ತುಮಕೂರು 31, ಮಂಡ್ಯ 20, ಬೆಂಗಳೂರು ಗ್ರಾಮಾಂತರ, ಕೋಲಾರ 12, ಚಾಮರಾಜನಗರ 8, ಬಳ್ಳಾರಿ 6, ಬೆಳಗಾವಿ 4, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 6, ದಾವಣಗೆರೆ 7, ಧಾರವಾಡ 5, ಹಾವೇರಿ 2, ಕಲಬುರಗಿ 7, ಕೊಪ್ಪಳ 4, ರಾಯಚೂರು 3, ರಾಮನಗರ 4, ವಿಜಯಪುರ 1.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ಬೆಂಗಳೂರು ನಗರ 5, ಉತ್ತರ ಕನ್ನಡ 4, ದಕ್ಷಿಣ ಕನ್ನಡ 3, ಮೈಸೂರು 2, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ 1.

ಕೊರೊನಾ ಸೋಂಕಿಗೆ ಹೆಣ್ಣುಮಗು ಸಾವು

ವಿಜಯಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ 3ನೇ ಅಲೆಗೆ 2 ವರ್ಷದ ಹೆಣ್ಣುಮಗುವೊಂದು ಮೃತಪಟ್ಟಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್​ ಹೇಳಿದ್ದಾರೆ. ಆಗಸ್ಟ್​ 20ರಂದು ಉಸಿರಾಟದ ಸಮಸ್ಯೆಯಿಂದ ಬಾಲಕಿ ಸಾವನ್ನಪ್ಪಿದ್ದಳು. ಆರ್​ಟಿಪಿಸಿಆರ್​ ಟೆಸ್ಟ್​ನಲ್ಲಿ ಕೊವಿಡ್ ನೆಗೆಟಿವ್ ಬಂದಿತ್ತು. ಆದರೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದರಿಂದ ಕೊವಿಡ್​ ಎಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

(Karnataka Covid Numbers 1102 infected 17 deaths on September 8)

ಇದನ್ನೂ ಓದಿ: ಬಿಬಿಎಂಪಿಯಿಂದ ಮನೆ ಮನೆ ಆರೋಗ್ಯ ಸಮೀಕ್ಷೆ; ಬೆಂಗಳೂರಿನಲ್ಲಿ 22,362 ಕೊರೊನಾ ಸೋಂಕಿತರು ಪತ್ತೆ

ಇದನ್ನೂ ಓದಿ: ಹೈಕೋರ್ಟ್ ಸುದ್ದಿಗಳು: ಕೊವಿಡ್ ಚಿಕಿತ್ಸೆಗೆ ಶುಲ್ಕ ನಿಗದಿ ಬಗ್ಗೆ ಸೂಕ್ತ ಪ್ರಚಾರ ನೀಡಲು ಸರ್ಕಾರಕ್ಕೆ ಸೂಚನೆ

Published On - 10:44 pm, Wed, 8 September 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್