ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಟ್ಟು 1262 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 17 ಮಂದಿ ಮೃತಪಟ್ಟಿದ್ದಾರೆ. 1384 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 18,758. ಪಾಸಿಟಿವಿಟಿ ಪ್ರಮಾಣ ಶೇ 0.70. ಸಾವಿನ ಸರಾಸರಿ ಶೇ 1.34 ಇದೆ.
ರಾಜ್ಯದಲ್ಲಿ ಈವರೆಗೆ ಒಟ್ಟು 29,47,255 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,91,193 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 37,278 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 361 ಮಂದಿಯಲ್ಲಿ ಸೋಂಕು ಖಚಿತವಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,37,286 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,13,959 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 15,983 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ರಾಜ್ಯದಲ್ಲಿ ಒಟ್ಟು 1262 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರ 361, ದಕ್ಷಿಣ ಕನ್ನಡ 202, ಉಡುಪಿ 96, ಕೊಡಗು, ಮೈಸೂರು, 86, ಹಾಸನ 72, ಶಿವಮೊಗ್ಗ 59, ಕೋಲಾರ 54, ಉತ್ತರ ಕನ್ನಡ 42, ತುಮಕೂರು, ಬೆಳಗಾವಿ 34, ದಾವಣಗೆರೆ 28, ಚಿಕ್ಕಮಗಳೂರು 26, ಚಿತ್ರದುರ್ಗ 22, ಮಂಡ್ಯ 14, ಚಾಮರಾಜನಗರ 13, ಬೆಂಗಳೂರು ಗ್ರಾಮಾಂತರ 9, ಧಾರವಾಡ 6, ಹಾವೇರಿ, ಕಲಬುರಗಿ 5, ಬಳ್ಳಾರಿ 3, ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ 1.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ರಾಜ್ಯದಲ್ಲಿ ಇಂದು ಒಟ್ಟು 17 ಮಂದಿ ಕೊವಿಡ್ನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ 6, ದಕ್ಷಿಣ ಕನ್ನಡ 3, ಹಾಸನ 2, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೊಡಗು, ಕೋಲಾರ, ರಾಮನಗರ, ಉತ್ತರ ಕನ್ನಡ 1.
(Karnataka Covid update 1262 People infected 17 died of covid infection on August 29)
ಇದನ್ನೂ ಓದಿ: ಫೇಸ್ಬುಕ್ ಪುಟದಲ್ಲಿ ಕೊವಿಡ್ ಸಂಬಂಧಿತ ಮಾಹಿತಿ ಒದಗಿಸುವ ಕೇರಳದ ವ್ಯಕ್ತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಗೌರವ
ಇದನ್ನೂ ಓದಿ: ಕೊವಿಡ್ ನಿಯಮಗಳನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ