Karnataka Covid Update: ಕರ್ನಾಟಕದಲ್ಲಿ ಇಂದು ಒಂದೇ ದಿನ 16,604 ಜನರಿಗೆ ಕೊವಿಡ್ ಸೋಂಕು ದೃಢ, ಬೆಂಗಳೂರಿನಲ್ಲಿ 3,992 ಜನರಿಗೆ ಸೋಂಕು ಪತ್ತೆ

Bengaluru Covid Update: ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3,992 ಜನರಿಗೆ ಕೊವಿಡ್ ದೃಢಪಟ್ಟಿದ್ದು 242 ಜನರು ಅಸು ನೀಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಇಂದು ಒಂದೇ ದಿನ 16,604 ಜನರಿಗೆ ಕೊವಿಡ್ ಸೋಂಕು ದೃಢ, ಬೆಂಗಳೂರಿನಲ್ಲಿ 3,992 ಜನರಿಗೆ ಸೋಂಕು ಪತ್ತೆ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on:May 31, 2021 | 7:50 PM

ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಂದೇ ದಿನ 16,604 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು 411 ಜನರು ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3,992 ಜನರಿಗೆ ಕೊವಿಡ್ ದೃಢಪಟ್ಟಿದ್ದು 242 ಜನರು ಅಸು ನೀಗಿದ್ದಾರೆ. ಇಂದಿನ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗಿನ ಕೊವಿಡ್ ಸೋಂಕಿತರ ಸಂಖ್ಯೆ 26, 04,431ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 29,090 ಜನರ ಸಾವನ್ನಪ್ಪಿದ್ದು, ಸೋಂಕಿತರ ಪೈಕಿ 22,61,590 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 3,13,730 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಒಂದೇ ದಿನ 44,473 ಜನರು ಕೊವಿಡ್ ಮುಕ್ತರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ 13.47ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಸೋಂಕಿತರ ವಿವರ ಬಾಗಲಕೋಟೆ 194, ಬಳ್ಳಾರಿ 437, ಬೆಳಗಾವಿ 910, ಬೆಂಗಳೂರು ಗ್ರಾಮಾಂತರ 383, ಬೆಂಗಳೂರು ನಗರ 3,992, ಬೀದರ್ 17, ಚಾಮರಾಜನಗರ 317, ಚಿಕ್ಕಬಳ್ಳಾಪುರ 415 ಚಿಕ್ಕಮಗಳೂರು 340, ಚಿತ್ರದುರ್ಗ 731, ದಕ್ಷಿಣ ಕನ್ನಡ 651, ದಾವಣಗೆರೆ 360, ಧಾರವಾಡ 291, ಗದಗ 240, ಹಾಸನ 1162, ಹಾವೇರಿ 134, ಕಲಬುರಗಿ 93, ಮಂಡ್ಯ 753, ಕೊಡಗು 193, ಕೋಲಾರ 465, ಕೊಪ್ಪಳ 249, ಉಡುಪಿ 519, ಮೈಸೂರು 1,171, ರಾಯಚೂರು 192, ರಾಮನಗರ 90, ಶಿವಮೊಗ್ಗ 589 , ತುಮಕೂರು 806, ಉತ್ತರ ಕನ್ನಡ 641, ವಿಜಯಪುರ 185 ಯಾದಗಿರಿ ಜಿಲ್ಲೆಯಲ್ಲಿ ಇಂದು 84 ಜನರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲಾವಾರು ಮೃತರ ವಿವರ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 411 ಜನ ಸಾವನ್ನಪ್ಪಿದ್ದು, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 242 ಜನರು ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ1, ಬೀದರ್ ಜಿಲ್ಲೆ 1, ಮೈಸೂರು ಜಿಲ್ಲೆ 13 , ದಕ್ಷಿಣ ಕನ್ನಡ ಜಿಲ್ಲೆ 7 , ಹಾಸನ ಜಿಲ್ಲೆ 12, ಕೊಡಗು ಜಿಲ್ಲೆ 1,  ಬಾಗಲಕೋಟೆ ಜಿಲ್ಲೆ 4, ಬಳ್ಳಾರಿ ಜಿಲ್ಲೆ 8, ದಾವಣಗೆರೆ ಜಿಲ್ಲೆ 1, ಚಿಕ್ಕಬಳ್ಳಾಪುರ ಜಿಲ್ಲೆ 5, ತುಮಕೂರು ಜಿಲ್ಲೆ 8 , ಬೆಳಗಾವಿ ಜಿಲ್ಲೆ 15, ಚಾಮರಾಜನಗರ ಜಿಲ್ಲೆ 3 ಜನರು ನಿಧನರಾಗಿದ್ದಾರೆ.

ಇದನ್ನೂ ಓದಿ: ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

ಅಹಮದ್​ನಗರದ 8,000 ಮಕ್ಕಳಲ್ಲಿ ಕೊವಿಡ್-19 ಸೋಂಕು, ಮಹಾರಾಷ್ಟ್ರಕ್ಕೆ ಈಗಲೇ ಕೊರನಾ ಸೋಂಕಿನ 3ನೇ ಅಲೆ ಅಪ್ಪಳಿಸಿದೆಯೇ?

(Karnataka Covid Update 16604 new cases and 411 death today)

Published On - 7:32 pm, Mon, 31 May 21

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ