Karnataka Covid Update: ಕರ್ನಾಟಕದಲ್ಲಿ ಇಂದು 1,708 ಜನರಿಗೆ ಕೊವಿಡ್ ದೃಢ, 36 ಜನರು ನಿಧನ
ಸದ್ಯ ರಾಜ್ಯದಲ್ಲಿ 29,291 ಜನರಲ್ಲಿ ಕೊರೊನಾ ಸೋಂಕು ಸಕ್ರಿಯ ಪ್ರಕರಣಗಳಿವೆ. ಇಂದು ಒಂದೇ ದಿನ 2,463 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು 1,708 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 36 ಜನರು ನಿಧನರಾಗಿದ್ದಾರೆ. ಬೆಂಗಳೂರಲ್ಲಿ ಇಂದು ದಿನ 386 ಜನರಿಗೆ ಸೋಂಕು ಖಚಿತಪಟ್ಟಿದ್ದು, 9 ಜನರು ನಿಧನರಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,83,947ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಸೋಂಕಿತರ ಪೈಕಿ 2818476 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,157 ಜನರು ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 29,291 ಜನರಲ್ಲಿ ಕೊರೊನಾ ಸೋಂಕು ಸಕ್ರಿಯ ಪ್ರಕರಣಗಳಿವೆ. ಇಂದು ಒಂದೇ ದಿನ 2,463 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆ 4, ಬಳ್ಳಾರಿ 1, ಬೆಳಗಾವಿ 55, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು ನಗರ 386, ಬೀದರ್ 8, ಚಾಮರಾಜನಗರ 23, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 105, ಚಿತ್ರದುರ್ಗ 15, ದಾವಣಗೆರೆ 23, ದಕ್ಷಿಣ ಕನ್ನಡ 241, ಧಾರವಾಡ 21, ಗದಗ 1, ಹಾಸನ 121, ಹಾವೇರಿ 8, ಕಲಬುರಗಿ 3, ಕೊಪ್ಪಳ 2, ಕೊಡಗು 45, ಕೋಲಾರ 33, ಮಂಡ್ಯ 53, ಉಡುಪಿ 105, ಮೈಸೂರು 210, ರಾಯಚೂರು 4, ರಾಮನಗರ 3, ಶಿವಮೊಗ್ಗ 82, ತುಮಕೂರು 64, ಉತ್ತರ ಕನ್ನಡ 44ವಿಜಯಪುರ ಜಿಲ್ಲೆಯಲ್ಲಿ ಇಂದು ಒಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 36 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು 9, ದಕ್ಷಿಣ ಕನ್ನಡ 6, ಮೈಸೂರು 4, ಕೋಲಾರ 3, ಬೆಂಗಳೂರು ಗ್ರಾಮಾಂತರ, ಉಡುಪಿ, ಶಿವಮೊಗ್ಗ ಜಿಲ್ಲೆ 2, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಮಂಡ್ಯ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 1 ಸಾವು ಸಂಭವಿಸಿದೆ.
ಇಂದಿನ 18/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/WEfnBwcdUq @CMofKarnataka @mla_sudhakar @drashwathcn @GovindKarjol @LaxmanSavadi @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/gapY9w751j
— K’taka Health Dept (@DHFWKA) July 18, 2021
ಇದನ್ನೂ ಓದಿ:
ಕೊವಿಡ್ ಲಸಿಕೆ ಪಡೆದ ಶತಾಯುಷಿ ಸಾಲುಮರದ ತಿಮ್ಮಕ್ಕ
Corona Vaccine: 40 ಕೋಟಿ ಡೋಸ್ ಸಮೀಪಿಸಿದ ಭಾರತದ ಕೊವಿಡ್19 ಲಸಿಕೆ ನೀಡಿಕೆ ಪ್ರಮಾಣ
(Karnataka Covid Update 1708 new cases and 36 dead today)
Published On - 7:19 pm, Sun, 18 July 21