Karnataka Covid Update: ಕರ್ನಾಟಕದಲ್ಲಿ ಇಂದು 2,848 ಜನರಿಗೆ ಕೊವಿಡ್ ದೃಢ, 67 ಜನರು ನಿಧನ

ಸದ್ಯ ರಾಜ್ಯದಲ್ಲಿ 41,996 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಜತೆಗೆ ಇಂದು ಒಂದೇ ದಿನ 5631 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

Karnataka Covid Update: ಕರ್ನಾಟಕದಲ್ಲಿ ಇಂದು 2,848 ಜನರಿಗೆ ಕೊವಿಡ್ ದೃಢ, 67 ಜನರು ನಿಧನ
ಕೊವಿಡ್ ಲಸಿಕೆ ಪಡೆಯುತ್ತಿರುವ ಮಹಿಳೆ
Follow us
TV9 Web
| Updated By: guruganesh bhat

Updated on: Jul 05, 2021 | 10:22 PM

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 2,848 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 67 ಜನರು ನಿಧನರಾಗಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 520 ಜನರಿಗೆ ಸೋಂಕು ಖಚಿತವಾಗಿದ್ದು, 7 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಪೈಕಿ 27,79,038 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,434 ಜನರ ಸಾವು ಸಂಭವಿಸಿದ್ದು, ಸದ್ಯ ರಾಜ್ಯದಲ್ಲಿ 41,996 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಜತೆಗೆ ಇಂದು ಒಂದೇ ದಿನ 5631 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬಾಗಲಕೋಟೆ 2, ಬಳ್ಳಾರಿ 15, ಬೆಳಗಾವಿ 95, ಬೆಂಗಳೂರು ಗ್ರಾಮಾಂತರ 57, ಬೆಂಗಳೂರು ನಗರ, ಬೀದರ್ 6, ಚಾಮರಾಜನಗರ 49, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 196, ಚಿತ್ರದುರ್ಗ 60, ದಕ್ಷಿಣ ಕನ್ನಡ 265, ದಾವಣಗೆರೆ 30, ಧಾರವಾಡ 12, ಗದಗ 7, ಹಾಸನ 383, ಹಾವೇರಿ 12, ಕಲಬುರಗಿ 26, ಕೊಡಗು 120, ಕೋಲಾರ 64, ಕೊಪ್ಪಳ 5, ಮಂಡ್ಯ 84, ಮೈಸೂರು 371, ರಾಯಚೂರು 9, ರಾಮನಗರ 10, ಶಿವಮೊಗ್ಗ 140, ತುಮಕೂರು 126, ಉಡುಪಿ 108, ಉತ್ತರ ಕನ್ನಡ 56, ವಿಜಯಪುರ 7, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 67 ಜನರ ಸಾವನ್ನಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆ 12, ಬಳ್ಳಾರಿ ಜಿಲ್ಲೆ 9, ಬೆಂಗಳೂರು ನಗರ 7, ಮೈಸೂರು ಜಿಲ್ಲೆ 6, ಧಾರವಾಡ, ಮಂಡ್ಯ ಜಿಲ್ಲೆ 4, ಕೋಲಾರ, ತುಮಕೂರು,ಬೆಳಗಾವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ 3, ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ ಜಿಲ್ಲೆ 2, ಚಾಮರಾಜನಗರ, ಹಾವೇರಿ, ಚಿಕ್ಕಮಗಳೂರು, ಗದಗ, ಕೊಡಗು, ರಾಯಚೂರು ಜಿಲ್ಲೆಗಳಲ್ಲಿ ತಲಾ 1 ಸಾವು ಸಂಭವಿಸಿದೆ.

ಇದನ್ನೂ ಓದಿ: 

Mekedatu Project: ಮೇಕೆದಾಟು ವಿವಾದ: ತಮಿಳುನಾಡು ಸಿಎಂ ಸ್ಟಾಲಿನ್​ಗೆ ಅನಗತ್ಯ ಪತ್ರ ಬರೆದು ವಿವಾದಕ್ಕೆ‌ ತುಪ್ಪ ಸುರಿದ ಸಿಎಂ ಯಡಿಯೂರಪ್ಪ

Pregnancy Care: ಕೊವಿಡ್​ ಸಮಯದಲ್ಲಿ ಗರ್ಭಿಣಿಯರಿಗಾಗಿ ಆರೋಗ್ಯ ಸಲಹೆಗಳು; ಆರೋಗ್ಯವನ್ನು ಕಾಳಜಿಯಿಂದ ನೋಡಿಕೊಳ್ಳಿ

(Karnataka Covid Update 2848 new cases and 67 deaths today)