AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು 3,979 ಜನರಿಗೆ ಕೊವಿಡ್ ದೃಢ, 138 ಜನರು ನಿಧನ

ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 34,425 ಜನರು ಮೃತಪಟ್ಟಿದ್ದು, 26,78,473 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಇಂದು  3,979 ಜನರಿಗೆ ಕೊವಿಡ್ ದೃಢ, 138 ಜನರು ನಿಧನ
ಹಿರಿಯ ನಾಗರಿಕರು ಕೊವಿಡ್ ಲಸಿಕೆ ಸ್ವೀಕರಿಸುತ್ತಿರುವುದು
TV9 Web
| Updated By: guruganesh bhat|

Updated on:Jun 24, 2021 | 7:51 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು 3,979 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 138 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 969 ಜನರಿಗೆ ಸೋಂಕು ಖಚಿತಪಟ್ಟಿದ್ದು, 14 ಜನರು ಮೃತಪಟ್ಟಿದ್ದಾರೆ. ಇಂದಿನ ಕೊವಿಡ್ ಸೋಂಕಿತರ ಸಂಖ್ಯೆಯನ್ನೂ ಸೇರಿಸಿ ರಾಜ್ಯದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ 28,23,444ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 34,425 ಜನರು ಮೃತಪಟ್ಟಿದ್ದು, 26,78,473 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು ಒಂದೇ ದಿನ 9,768 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಹಿಂತಿರುಗಿದ್ದಾರೆ.

ಬಾಗಲಕೋಟೆ 7, ಬಳ್ಳಾರಿ 67, ಬೆಳಗಾವಿ 98, ಬೆಂಗಳೂರು ಗ್ರಾಮಾಂತರ 81, ಬೆಂಗಳೂರು ನಗರ 969, ಬೀದರ್ 18, ಚಾಮರಾಜನಗರ 64, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 110, ಚಿತ್ರದುರ್ಗ 33, ದಕ್ಷಿಣ ಕನ್ನಡ 498, ದಾವಣಗೆರೆ 118, ಧಾರವಾಡ 62, ಗದಗ 18, ಹಾಸನ 336, ಹಾವೇರಿ 28, ಕಲಬುರಗಿ 31, ಕೊಡಗು 115, ಕೊಪ್ಪಳ 18, ಕೋಲಾರ 103, ಮಂಡ್ಯ 137, ಮೈಸೂರು 404 , ಉಡುಪಿ 123, ರಾಯಚೂರು 16, ರಾಮನಗರ 32, ಶಿವಮೊಗ್ಗ 206, ತುಮಕೂರು 128, ಉತ್ತರ ಕನ್ನಡ 104, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 7 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 138 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆ 14, ಮೈಸೂರು ಜಿಲ್ಲೆ 22, ದಕ್ಷಿಣ ಕನ್ನಡ, ಬಳ್ಳಾರಿ, ಧಾರವಾಡ ಜಿಲ್ಲೆ 10, ಹಾಸನ ಜಿಲ್ಲೆ 9, ಕೋಲಾರ, ಉಡುಪಿ ಜಿಲ್ಲೆ 7, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾವೇರಿ ಜಿಲ್ಲೆ 6, ಶಿವಮೊಗ್ಗ ಜಿಲ್ಲೆ 5, ದಾವಣಗೆರೆ ಜಿಲ್ಲೆ 3, ಚಿತ್ರದುರ್ಗ, ಕೊಡಗು, ಕೊಪ್ಪಳ, ತುಮಕೂರು, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ 2, ಬಾಗಲಕೋಟೆ, ಬೆಳಗಾವಿ, ಬೀದರ್, ಮಂಡ್ಯ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿಂದು ಸೋಂಕಿಗೆ ತಲಾ ಓರ್ವ ನಿಧನರಾಗಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರ, ನೊಂದವರ ಗಣತಿ ನಡೆಸಲು ಕಾಂಗ್ರೆಸ್​ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ

ಕೊವಿಡ್ ಲಸಿಕೆ ಪಡೆಯಲು ಪ್ರೋತ್ಸಾಹಿಸಬೇಕು, ಮೂರನೇ ಅಲೆ ಎದುರಿಸಲು ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ವಿನಂತಿ

(Karnataka Covid Update 3979 new cases and 138 new deaths in last 24 hours)

Published On - 7:09 pm, Thu, 24 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ