ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 523 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. 621 ಮಂದಿ ಸೋಂಕಿನಿಂದ ಚೇತರಿಸಿಕೊಂಡು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 11,819 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.39 ಇದೆ. ಸಾವಿನ ಪ್ರಮಾಣ ಶೇ 1.72 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,79,331 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು 29,29,629 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 37,854 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಬುಧವಾರ 205 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 230 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದಲ್ಲಿ ಒಟ್ಟು 7,572 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ನಗರದ ಒಟ್ಟು ಸೋಂಕಿತರ ಸಂಖ್ಯೆ 12,47,664ಕ್ಕೆ ಮುಟ್ಟಿದ್ದು, 12,23,916 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,175 ಮಂದಿ ಕೊವಿಡ್ನಿಂದ ಸಾವನ್ನಪ್ಪಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬಳ್ಳಾರಿ 6, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 9, ಬೀದರ್, ಚಾಮರಾಜನಗರ 2, ಚಿಕ್ಕಮಗಳೂರು 7, ಚಿತ್ರದುರ್ಗ 6, ದಕ್ಷಿಣ ಕನ್ನಡ 43, ದಾವಣಗೆರೆ 3, ಧಾರವಾಡ 4, ಗದಗ 2, ಹಾಸನ 50, ಕೊಡಗು 11, ಕೋಲಾರ 3, ಮಂಡ್ಯ 18, ಮೈಸೂರು 62, ರಾಮನಗರ 4, ಶಿವಮೊಗ್ಗ 21, ತುಮಕೂರು 28, ಉಡುಪಿ 16, ಉತ್ತರ ಕನ್ನಡ 13, ಬಾಗಲಕೋಟೆ, ರಾಯಚೂರು, ಕೊಪ್ಪಳ 1.
ಯಾವ ಜಿಲ್ಲೆಯಲ್ಲಿ ಎಷ್ಟು ಸಾವು?
ಬೆಂಗಳೂರು ನಗರ 2, ದಕ್ಷಿಣ ಕನ್ನಡ 1, ಮೈಸೂರು 5, ತುಮಕೂರು 1.
ಇಂದಿನ 06/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/FZ4VrShP0s
@CMofKarnataka @BSBommai @mla_sudhakar @BBMPCOMM @mysurucitycorp @mangalurucorp @DDChandanaNews @AIRBENGALURU1 @KarnatakaVarthe @PIBBengaluru pic.twitter.com/YzCjZBoqCo
— K’taka Health Dept (@DHFWKA) October 6, 2021
ಇದನ್ನೂ ಓದಿ: Covid Vaccine: ಕೊರೊನಾ ಲಸಿಕೆ ಬಳಿಕವೂ ಭಾರತದಲ್ಲಿ ಬೂಸ್ಟರ್ ಶಾಟ್ಸ್ ಅಗತ್ಯವಿದೆ; ಹಿರಿಯ ವಿಜ್ಞಾನಿ
ಇದನ್ನೂ ಓದಿ: Coronavirus cases in India: ದೇಶದಲ್ಲಿ 18,833 ಹೊಸ ಕೊವಿಡ್ ಪ್ರಕರಣ ಪತ್ತೆ, 278 ಮಂದಿ ಸಾವು
Published On - 7:35 pm, Wed, 6 October 21