ಕೇರಳದಿಂದ ಬರುವವರಿಗೆ 1 ವಾರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಡಾ. ಕೆ. ಸುಧಾಕರ್, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು ಎಂದಿದ್ದಾರೆ.
ಚಿಕ್ಕಬಳ್ಳಾಪುರ: ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಡಾ. ಕೆ. ಸುಧಾಕರ್, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು ಎಂದಿದ್ದಾರೆ.
ಕೇರಳದಿಂದ ಪ್ರತಿ ದಿನ ಅನೇಕರು ಗಡಿ ಜಿಲ್ಲೆಗಳಿಗೆ ಬರುತ್ತಾರೆ. ಶಿಕ್ಷಣ, ಆರೋಗ್ಯ ಸೇವೆ, ನಿತ್ಯದ ವಹಿವಾಟುಗಳಿಗೆ ದಕ್ಷಿಣ ಕನ್ನಡ, ಉಡುಪಿ ಮೊದಲಾದ ಜಿಲ್ಲೆಗಳಿಗೆ ಜನರು ಬರುತ್ತಾರೆ. ಇನ್ನು ವಿಮಾನ, ರೈಲುಗಳ ಮೂಲಕ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕಿದೆ. ಇದಕ್ಕಾಗಿ ಕೋವಿಡ್ ಮಾರ್ಗಸೂಚಿ ರೂಪಿಸಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಕೆಜಿಎಫ್ನ ಶಿಕ್ಷಣ ಸಂಸ್ಥೆಯಲ್ಲಿ 32 ವಿದ್ಯಾರ್ಥಿಗಳಿಗೆ ಕೊವಿಡ್ ಸೋಂಕು ತಗುಲಿದೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಕೇರಳದಿಂದ ಬಂದವರಾಗಿದ್ದಾರೆ. ನಾಳೆ ಸಂಸ್ಥೆಗೆ ಹೋಗಿ ಸಂಸ್ಥೆಯ ಮೇಲೂ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಕೇರಳದಿಂದ ಬಂದಾಗಲೇ ಅವರ ನೆಗೆಟಿವ್ ವರದಿ ಪಡೆಯಬೇಕಿತ್ತು. ಇದು ಸಂಸ್ಥೆಯ ಜವಾಬ್ದಾರಿಯೂ ಆಗಿದೆ. ರಾಜ್ಯದಲ್ಲಿ 50 ಸಾವಿರ ಪ್ರಕರಣಗಳನ್ನು 700-800ಕ್ಕೆ ತರಲಾಗಿದೆ. ಸರ್ಕಾರ ಇಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಕೋವಿಡ್-19 ಬಗ್ಗೆ ಅರಿವು ಮೂಡಿಸುತ್ತಿರುವ ಎಲ್ಲಾ ರೀತಿಯ ಮಾಧ್ಯಮಗಳಿಗೆ ಹಾಗೂ ವರದಿಗಾರರಿಗೆ ಧನ್ಯವಾದ ಸಲ್ಲಿಸಿದ ನಟ @rakshitshetty @CMofKarnataka @mla_sudhakar @hublimandi @Kalaburgivarthe @drmsbc @drmubl @DrmMys @Namducbpura @bellaryvartha pic.twitter.com/PRaq7xOvmh
— K’taka Health Dept (@DHFWKA) August 31, 2021
ಮಕ್ಕಳಿಗೆ ಶೈಕ್ಷಣಿಕ ಭವಿಷ್ಯ ಹಾಗೂ ಸಂರಕ್ಷಣೆ ಸರ್ಕಾರದ ಜವಾಬ್ದಾರಿ. ಎಲ್ಲಾ ಶಾಲೆಗಳಲ್ಲಿ ವಿಶೇಷ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿದೆ. ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ಕಂಡುಬಂದರೆ ಶಾಲೆ ಮುಚ್ಚಿ ಕ್ರಮ ವಹಿಸಲಾಗುತ್ತದೆ ಎಂದು ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕಾರ್ಯಕ್ರಮ, ಸಮಾರಂಭಗಳನ್ನು ಮಾಡುವವರು ಕೊವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಲೇಬೇಕು. ಕೊವಿಡ್ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆ, ಆರೋಗ್ಯ ಇಲಾಖೆಯ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಕೊರೊನಾ ನಿಯಂತ್ರಿಸುವ ಒಂದೇ ದೃಷ್ಟಿಯಿಂದ ನಾವು ನೋಡುತ್ತಿದ್ದೇವೆ. ಮುಖ್ಯಮಂತ್ರಿಗಳು ಎಲ್ಲಾ ದೃಷ್ಟಿಕೋನದಿಂದ ನೋಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕೇರಳದಿಂದ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ವಾರಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ
ಮತ್ತೆ ಬರಲಿದೆ ಸಾಂಸ್ಥಿಕ ಕ್ವಾರಂಟೈನ್; ಬಿಬಿಎಂಪಿ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ
(Karnataka Covid Updates Institutional Quarantine Mandatory for People who come from other States Minister K Sudhakar says)