Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,990 ಕೊರೊನಾ ಪ್ರಕರಣ ಪತ್ತೆ; 45 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,20,498 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,92,163 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 14) ಹೊಸದಾಗಿ 1,990 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,76,587 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,06,933 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 45 ಜನರ ಸಾವು ಸಂಭವಿಸಿದೆ. ತನ್ಮೂಲಕ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,989 ಜನರು ಮೃತಪಟ್ಟಿದ್ದಾರೆ. 33,642 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,20,498 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,92,163 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 8 ಜನರ ಸಾವು ಸಂಭವಿಸಿದೆ. ನಗರದಲ್ಲಿ ಕೊರೊನಾದಿಂದ ಈವರೆಗೆ 15,761 ಜನರ ಸಾವು ವರದಿಯಾಗಿದೆ. 12,573 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬೆಂಗಳೂರು ನಗರ 400, ದಕ್ಷಿಣ ಕನ್ನಡ ಜಿಲ್ಲೆ 219, ಮೈಸೂರು 211, ಹಾಸನ 175, ಬೆಳಗಾವಿ 140, ಉಡುಪಿ 120, ಶಿವಮೊಗ್ಗ 99, ಚಿಕ್ಕಮಗಳೂರು 94, ತುಮಕೂರು 78, ಮಂಡ್ಯ 69, ಉತ್ತರ ಕನ್ನಡ 69, ಕೊಡಗು 42, ಚಾಮರಾಜನಗರ 41, ಕೋಲಾರ 40, ಬೆಂಗಳೂರು ಗ್ರಾಮಾಂತರ 40, ಚಿಕ್ಕಬಳ್ಳಾಪುರ 23, ದಾವಣಗೆರೆ 20, ಧಾರವಾಡ 18, ರಾಮನಗರ 17, ಬಳ್ಳಾರಿ 16, ಕಲಬುರಗಿ 14, ಹಾವೇರಿ 10, ಕೊಪ್ಪಳ 10, ಗದಗ 7, ವಿಜಯಪುರ 7, ಬಾಗಲಕೋಟೆ 4, ಚಿತ್ರದುರ್ಗ 4, ಬೀದರ್ 2 ಹಾಗೂ ರಾಯಚೂರು ಜಿಲ್ಲೆಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.
ಜಿಲ್ಲಾವಾರು ಕೊರೊನಾ ಮೃತರ ವಿವರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 45 ಜನರ ಸಾವು ಸಂಭವಿಸಿದೆ. ಬೆಂಗಳೂರಿನಲ್ಲಿ 8, ದಕ್ಷಿಣ ಕನ್ನಡ 6, ಮೈಸೂರು ಜಿಲ್ಲೆಯಲ್ಲಿ 6, ಬೆಳಗಾವಿ ಜಿಲ್ಲೆಯಲ್ಲಿ 4, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 3, ಬಳ್ಳಾರಿ, ಹಾಸನ, ಕೋಲಾರ, ತುಮಕೂರು ಜಿಲ್ಲೆಯಲ್ಲಿಂದು ತಲಾ 2, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಕೊಡಗು, ಮಂಡ್ಯ, ಶಿವಮೊಗ್ಗ, ವಿಜಯಪುರ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ.
ಇದನ್ನೂ ಓದಿ: ಕೊವಿಡ್ 3ನೇ ಅಲೆ ಆತಂಕ: ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಸಲಹೆ