Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳು ಇಳಿಕೆ; ಮರಣ ಪ್ರಮಾಣದಲ್ಲಿ ಸುಧಾರಣೆ ಇಲ್ಲ

ಸೋಂಕಿತರ ಪೈಕಿ 20,22,172 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 588 ಜನರ ಸಾವು ಸಂಭವಿಸಿದೆ.

Karnataka Covid Update: ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳು ಇಳಿಕೆ; ಮರಣ ಪ್ರಮಾಣದಲ್ಲಿ ಸುಧಾರಣೆ ಇಲ್ಲ
ಕೊರೊನಾ ವೈರಸ್
Follow us
TV9 Web
| Updated By: ganapathi bhat

Updated on:Aug 21, 2021 | 9:50 AM

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 22,758 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 20,22,172 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 588 ಜನರ ಸಾವು ಸಂಭವಿಸಿದೆ. ತನ್ಮೂಲಕ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 26,399 ಜನರು ಮೃತಪಟ್ಟಂತಾಗಿದೆ. 4,24,381 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 6,243 ಜನರಿಗೆ ಸೋಂಕು ತಗುಲಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 350 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಇಂದು ಕೂಡ ಇಳಿಕೆ ಕಂಡಿದೆ. ಕೊವಿಡ್​ನಿಂದ ಇಂದು 38,224 ಮಂದಿ ಗುಣಮುಖರಾಗಿದ್ದಾರೆ. ಅಂದರೆ, ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಆದರೆ, ಕೊರೊನಾದಿಂದ ಸಂಭವಿಸುತ್ತಿರುವ ಸಾವಿನ ಸಂಖ್ಯೆಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಮರಣಿಸುತ್ತಿರುವವರ ಪ್ರಮಾಣ ಕಡಿಮೆ ಆಗಿಲ್ಲ.

ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,31,496ಕ್ಕೆ ಏರಿಕೆಯಾಗಿದೆ. ಆ ಪೈಕಿ 9,00,081 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 350 ಜನರ ಬಲಿಯಾಗಿದ್ದು, ಕೊರೊನಾದಿಂದ ಈವರೆಗೆ 11,863 ಜನರ ಸಾವು ಸಂಭವಿಸಿದೆ. 2,19,551 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬೆಂಗಳೂರು ನಗರ ಜಿಲ್ಲೆ 6243, ಮೈಸೂರು 2241, ತುಮಕೂರು 1312, ಹಾಸನ 1285, ಬೆಳಗಾವಿ 1260, ಉತ್ತರ ಕನ್ನಡ 992, ಬೆಂಗಳೂರು ಗ್ರಾಮಾಂತರ 837, ಚಿಕ್ಕಮಗಳೂರು 797, ದಕ್ಷಿಣ ಕನ್ನಡ 755, ಬಳ್ಳಾರಿ 718, ಧಾರವಾಡ 709, ಉಡುಪಿ 640, ಕೋಲಾರ 585, ಶಿವಮೊಗ್ಗ 529, ದಾವಣಗೆರೆ 515, ರಾಯಚೂರು 430, ಚಿತ್ರದುರ್ಗ 392, ಗದಗ 259, ಚಾಮರಾಜನಗರ 282, ರಾಮನಗರ 252, ಮಂಡ್ಯ 244, ಕೊಡಗು 213, ಬಾಗಲಕೋಟೆ 211, ಕೊಪ್ಪಳ 206, ಚಿಕ್ಕಬಳ್ಳಾಪುರ 176, ಹಾವೇರಿ 168, ಕಲಬುರಗಿ 165, ಯಾದಗಿರಿ 153, ವಿಜಯಪುರ 141, ಬೀದರ್ ಜಿಲ್ಲೆಯಲ್ಲಿ 48 ಜನರಿಗೆ ಸೋಂಕು ದೃಢಪಟ್ಟಿದೆ.

ಕೊರೊನಾದಿಂದ ಮೃತಪಟ್ಟವರ ವಿವರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 588 ಜನರ ಸಾವು ಸಂಭವಿಸಿದೆ. ಆ ಪೈಕಿ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 350 ಜನರ ಬಲಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 24, ಬಳ್ಳಾರಿ ಜಿಲ್ಲೆಯಲ್ಲಿ 20, ಶಿವಮೊಗ್ಗ ಜಿಲ್ಲೆಯಲ್ಲಿ 19, ಮೈಸೂರು ಜಿಲ್ಲೆಯಲ್ಲಿಂದು 17, ಉತ್ತರ ಕನ್ನಡ ಜಿಲ್ಲೆಯಲ್ಲಿ 15, ತುಮಕೂರು ಜಿಲ್ಲೆಯಲ್ಲಿ 14, ಧಾರವಾಡ ಜಿಲ್ಲೆಯಲ್ಲಿ 12, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 11, ಹಾಸನ ಜಿಲ್ಲೆಯಲ್ಲಿ 11, ಕಲಬುರಗಿ ಜಿಲ್ಲೆಯಲ್ಲಿ 11, ಕೋಲಾರ ಜಿಲ್ಲೆಯಲ್ಲಿ 11, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10, ಚಾಮರಾಜನಗರ ಜಿಲ್ಲೆಯಲ್ಲಿ 8, ಹಾವೇರಿ ಜಿಲ್ಲೆಯಲ್ಲಿ 7, ಚಿಕ್ಕಮಗಳೂರು ಜಿಲ್ಲೆಯಲ್ಲಿ 6, ಮಂಡ್ಯ, ವಿಜಯಪುರ ಜಿಲ್ಲೆಯಲ್ಲಿ ತಲಾ 6, ಗದಗ ಜಿಲ್ಲೆಯಲ್ಲಿಂದು 5, ಉಡುಪಿ ಜಿಲ್ಲೆಯಲ್ಲಿಂದು 4, ದಾವಣಗೆರೆ, ಕೊಡಗು ಜಿಲ್ಲೆಯಲ್ಲಿಂದು ತಲಾ 3, ರಾಯಚೂರು, ರಾಮನಗರ ಜಿಲ್ಲೆಯಲ್ಲಿ ತಲಾ 3, ಬೀದರ್, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ತಲಾ 2, ಕೊಪ್ಪಳ, ಯಾದಗಿರಿ ಜಿಲ್ಲೆಯಲ್ಲಿ ಇಂದು ತಲಾ 2, ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಕೊರೊನಾಗೆ 1 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 26,399 ಜನರ ಸಾವು ಸಂಭವಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Covid Antibody Cocktail: ಕೊರೊನಾ ಚಿಕಿತ್ಸೆಗೆ ಹೊಸ ಔಷಧಿ, ಗುರುಗ್ರಾಮದಲ್ಲಿ ಮೇ 26ರಿಂದ ಆ್ಯಂಟಿಬಾಡಿ ಕಾಕ್​ಟೇಲ್ ಚಿಕಿತ್ಸೆ ಆರಂಭ

ಅನ್ನ ಮಾಡಿ ಬೀದಿಗೆ ಹಾಕಿದರೆ ಕೊರೊನಾ ಮಾರಿ ಹೋಗುತ್ತದಾ? ಇದೆಂತಹ ನಂಬಿಕೆಯಲ್ಲಿ ಮುಳುಗಿದ್ದಾರೆ ಜನ

Published On - 7:37 pm, Tue, 25 May 21

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್