Crime News: ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 3ನೇ ಸೆಮ್‌ನಲ್ಲಿ ಓದುತ್ತಿದ್ದ ಸಂದೀಪ್ಗೆ ಮೇ 13ರಂದು 3ನೇ ಸೆಮಿಸ್ಟರ್ ಪರೀಕ್ಷೆ ಮುಗಿದಿತ್ತು. ವಿದ್ಯಾರ್ಥಿ ಸಂದೀಪ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗದ ವಿನೋಬ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Crime News: ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ವಿದ್ಯಾರ್ಥಿ ಸಂದೀಪ್
Follow us
TV9 Web
| Updated By: ಆಯೇಷಾ ಬಾನು

Updated on:May 16, 2022 | 8:16 PM

ಶಿವಮೊಗ್ಗ: ಜಿಲ್ಲೆಯ ಜವಾಹರ್‌ಲಾಲ್ ನೆಹರೂ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಮೂಲದ ವಿದ್ಯಾರ್ಥಿ ಸಂದೀಪ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 3ನೇ ಸೆಮ್‌ನಲ್ಲಿ ಓದುತ್ತಿದ್ದ ಸಂದೀಪ್ಗೆ ಮೇ 13ರಂದು 3ನೇ ಸೆಮಿಸ್ಟರ್ ಪರೀಕ್ಷೆ ಮುಗಿದಿತ್ತು. ವಿದ್ಯಾರ್ಥಿ ಸಂದೀಪ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗದ ವಿನೋಬ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಕಸಾಯಿಖಾನೆ ಬಗ್ಗೆ ಮಾಹಿತಿ ನೀಡಿದಕ್ಕೆ ಹಲ್ಲೆ ನಡೆಸಿದ ಆರೋಪಿಗಳ ಬಂಧನ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಗೋ ರಕ್ಷಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಪುರ‌ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚನ್ನಪಟ್ಟಣದ ಇಂದಿರಾ ಕಾಟೇಜ್‌ ಪ್ರದೇಶದ ನಿಹಾಲ್ ಮೆಹದಿ, ಮೊಹಮ್ಮದ್‌ ಅಕ್ರಂ, ಜನತಾ ಸಾಮಿಲ್‌ನ ಸಾದಿಕ್ ಪಾಷಾ, ಮೊಹಮ್ಮದ್ ಅಸ್ಗರ್‌ನನ್ನು ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಮುದ್ರದಲ್ಲಿ ಮುಳುಗಿ ಯುವಕ ಸಾವು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಅಲೆಗೆ ಸಿಕ್ಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಛತ್ತೀಸ್‌ಘಡ್ ಮೂಲದ ಆದಿತ್ಯ ಪಾಂಡೆ (25) ಮೃತ ಯುವಕ. ತನ್ನ ಗೆಳೆಯರೊಂದಿಗೆ ಗೋಕರ್ಣಕ್ಕೆ ಬಂದಿದ್ದ ಯುವಕ ಗೆಳೆಯರೊಂದಿಗೆ ಸಮುದ್ರ ಸ್ನಾನ ಮಾಡಲು ಹೋಗಿ ಮೃತಪಟ್ಟಿದ್ದಾನೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರು ಕುಡಿಯಲು ಹೋಗಿ ಮೂರು ಬಾಲಕಿಯರು ನೀರು ಪಾಲು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ‌ಅತ್ತಿಕಟ್ಟಿ ತಾಂಡಾದಲ್ಲಿ ನೀರು ಕುಡಿಯಲು ಹೋಗಿ ಮೂರು ಬಾಲಕಿಯರು ನೀರು ಪಾಲಾಗಿದ್ದಾರೆ. ಸುನಿತಾ ಲಕ್ಷ್ಮಣ ಲಮಾಣಿ (9), ಅಂಕಿತಾ ಲಕ್ಷ್ಮಣ ಲಮಾಣಿ (13), ಸುನಿತಾ ಲೋಕೆಶ ಲಮಾಣಿ (10) ಮೃತ ದುರ್ದೈವಿಗಳು. ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಬಾಲಕಿಯ ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಸ್ಥಳಕ್ಕೆ ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ, ಸಿಪಿಐ ಸುನೀಲ್ ಸೌದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಗಂಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕಳೆದ 10 ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಚಂದ್ರಶೇಖರ್, ಮಾರ್ಚ್ 31 ರಂದು 2 ನೇ ತರಗತಿ ವಿದ್ಯಾರ್ಥಿನಿಗೆ ಲೈಗಿಂಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಇಂದು ಶಾಲೆ ಆರಂಭವಾದ ಹಿನ್ನಲೆ ಶಾಲೆಗೆ ಹೋಗಲು ಬಾಲಕಿ ನಕಾರ ಮಾಡಿದ ಕಾರಣ ವಿದ್ಯಾರ್ಥಿನಿ ಬಳಿ ಪೋಷಕರು ಏಕೆ ಶಾಲೆಗೆ ಹೋಗಲ್ಲ ಎಂದು ಕೇಳಿದಾಗ ಪೋಷಕರಿಗೆ ಮಗಳು ವಿಷಯ ತಿಳಿಸಿದ್ದಾಳೆ.

ಸುದ್ದಿ ತಿಳಿದ ತಕ್ಷಣ ಕಿಕ್ಕೇರಿ ಪೊಲೀಸ್ ಠಾಣೆಗೆ ತೆರಳಿ ಪೋಷಕರು ದೂರು ನೀಡಿದ್ದಾರೆ. ಶಿಕ್ಷಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಬಿಇಓ ಬಸವರಾಜು ಶಿಕ್ಷಕನನ್ನು ಅಮಾನತು ಮಾಡಿದ್ದಾರೆ.

Published On - 7:50 pm, Mon, 16 May 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ