Crime News: ತಂದೆ ಮೇಲಿನ ದ್ವೇಷಕ್ಕೆ ಎರಡೂವರೆ ವರ್ಷದ ಬಾಲಕನ ಕೊಲೆ ಮಾಡಿದ ಪಾಪಿಗಳು, ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಾಲಕನ ತಂದೆ ನಿಸಾರ್ ಅಹ್ಮದ್ ಜೊತೆ ದ್ವೇಷ ಹೊಂದಿದ್ದ ನವಾಜ್ ತಂದೆ ಮೇಲಿನ ಸೇಡನ್ನು ಆತನ ಮಗನ ಮೇಲೆ ತೀರಿಸಿಕೊಂಡಿದ್ದಾನೆ. ನವಾಜ್, ತನ್ನ ಸಹಚರರ ಜೊತೆ ಸೇರಿ ಬಾಲಕನ ಕೊಲೆ ಮಾಡಿಸಿದ್ದಾನೆ.

Crime News: ತಂದೆ ಮೇಲಿನ ದ್ವೇಷಕ್ಕೆ ಎರಡೂವರೆ ವರ್ಷದ ಬಾಲಕನ ಕೊಲೆ ಮಾಡಿದ ಪಾಪಿಗಳು, ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮೃತ ಬಾಲಕ ಮಹ್ಮದ್ ಮುಜಮಿಲ್
Follow us
TV9 Web
| Updated By: ಆಯೇಷಾ ಬಾನು

Updated on:May 24, 2022 | 8:30 PM

ಕಲಬುರಗಿ: ಜಿಲ್ಲೆಯಲ್ಲಿ ನಡೆದ ಎರಡೂವರೆ ವರ್ಷದ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರು ತಿಂಗಳ ಬಳಿಕ ಕೊಲೆ ಪ್ರಕರಣ ಭೇದಿಸಿದ ಕಲಬುರಗಿ ವಿವಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಿರ್ದೋಶ್ ಕಾಲೋನಿ ನಿವಾಸಿಗಳಾದ ನವಾಜ್, ಸದ್ದಾಂ, ಸೋಹೆಲ್, ಜಹೀರ್ ಬಂಧಿತ ಆರೋಪಿಗಳು.

ಕಳೆದ ವರ್ಷ ಡಿಸೆಂಬರ್ 6ರಂದು ಪಿರ್ದೋಶ್ ಕಾಲೋನಿಯ ಬಾಲಕ ಮಹ್ಮದ್ ಮುಜಮಿಲ್ ಕೊಲೆ ಮಾಡಲಾಗಿತ್ತು. ಈ ಬಗ್ಗೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ ಆರು ತಿಂಗಳಾದ್ರು ಕೂಡಾ ಆರೋಪಿಗಳು ಪತ್ತೆಯಾಗಿರಲಿಲ್ಲ. ಸದ್ಯ ಈಗ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನ ತಂದೆ ನಿಸಾರ್ ಅಹ್ಮದ್ ಜೊತೆ ದ್ವೇಷ ಹೊಂದಿದ್ದ ನವಾಜ್ ತಂದೆ ಮೇಲಿನ ಸೇಡನ್ನು ಆತನ ಮಗನ ಮೇಲೆ ತೀರಿಸಿಕೊಂಡಿದ್ದಾನೆ. ನವಾಜ್, ತನ್ನ ಸಹಚರರ ಜೊತೆ ಸೇರಿ ಬಾಲಕನ ಕೊಲೆ ಮಾಡಿಸಿದ್ದಾನೆ. ಇದನ್ನೂ ಓದಿ: ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿರೋ ಕಪೂರ್ ಕುಡಿ

ಶಾಲೆ ಮುಗಿಸಿ ತೆರಳುತ್ತಿದ್ದ ಶಿಕ್ಷಕ ದಂಪತಿ ಅಪಘಾತದಲ್ಲಿ ಸಾವು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೊ ಡಿಕ್ಕಿಯಾಗಿದ್ದು ಬೈಕ್ನಲ್ಲಿ ತೆರಳುತ್ತಿದ್ದ ಶಿಕ್ಷಕ ದಂಪತಿ ಮೃತಪಟ್ಟಿದ್ದಾರೆ. ದಯಾನಂದ(45), ರಾಜೇಶ್ವರಿ(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸ್ನೇಹಿತನ ಜೊತೆ ಮದ್ಯ ಸೇವಿಸಲು ತೆರಳಿದ್ದ ವ್ಯಕ್ತಿ ಕೊಲೆ ಹುಬ್ಬಳ್ಳಿ: ಗುಟ್ಕಾ ವಿಚಾರಕ್ಕೆ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿದೆ. ಹುಬ್ಬಳ್ಳಿಯ ಆನಂದ ನಗರದ ಖೋಡೆ ಬಾರ್ಗೆ ಸ್ನೇಹಿತನ ಜೊತೆ ಮದ್ಯ ಸೇವಿಸಲು ತೆರಳಿದ್ದ ಮೆಹಬೂಬ್ ಕಳಸ ಕೊಲೆಯಾಗಿದೆ. ವಿಮಲ್ ಗುಟ್ಕಾ ವಿಚಾರಕ್ಕೆ ಸ್ನೇಹಿತ ಮಹ್ಮದ್ ಗೌಸ್ ಮತ್ತು ಮೆಹಬೂಬ್ ಕಳಸಗೆ ಕಿರಿಕ್ ಆಗಿದೆ. ಜಗಳ ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ಕಿಮ್ಸ್ ಗೆ ಶವ ರವಾನಿಸಲಾಗಿದೆ. ಇದನ್ನೂ ಓದಿ: Terrorist Attack: ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ; ಪೊಲೀಸ್​ ಕಾನ್​ಸ್ಟೆಬಲ್ ಸಾವು, ಅವರ ಮಗಳಿಗೆ ಗಾಯ

ಕಾರು ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಜೂರಟಗಿ ಕ್ರಾಸ್ ಸಮೀಪ ಕಾರ್ ಮತ್ತು ಬೈಕ್ ಮುಖಾಮುಖಿಯಾಗಿ ಅಪಘಾತ ಸಂಭವಿಸಿದ್ದು ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶ್ರೀಧರ ಮತ್ತು ನಾಗರಾಜ ಮೃತ ದುರ್ದೈವಿಗಳು. ಕಾರಟಗಿ ಇಂದ ಗಂಗಾವತಿ ಕಡೆ ಹೊರಟಿದ್ದ ಬೈಕ್ಗೆ ಗಂಗಾವತಿ ಇಂದ ಸಿಂಧನೂರ ಕಡೆ ಹೊರಟಿದ್ದ ಕಾರ್ ಡಿಕ್ಕಿ ಹೊಡೆದಿದೆ. ಕಾರಟಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರ್ ಮತ್ತು ಬೈಕ್ ನುಜ್ಜು ಗುಜ್ಜಾಗಿದೆ.

Published On - 8:30 pm, Tue, 24 May 22

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ