Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ.

Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:May 25, 2022 | 10:36 PM

ಚಿಕ್ಕಬಳ್ಳಾಪುರ: ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ. ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರು. ಮತ್ತೊಬ್ಬ ಕಾರ್ಮಿಕ ಫರ್ವೇಜ್ಗೆ ಗಂಭೀರ ಗಾಯಗಳಾಗಿದ್ದು ಗಾಯಾಳನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ತುಮಕೂರು ಮೂಲದ ರಾಜಾ ಎಲೆಕ್ಟ್ರಿಕಲ್ನ ಗಂಗರಾಜ ಎಂಬುವರಿಗೆ ಸೇರಿದ 50 ಕೋಟಿ ರೂಪಾಯಿ ಮೊತ್ತದ ಗುತ್ತಿಗೆ ಕಾಮಗಾರಿ ಇದಾಗಿದ್ದು ಕೂಲಿ ಕಾರ್ಮಿಕರಿಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಇದ್ದುದ್ದೇ ದುರಂತ ಕಾರಣ ಎನ್ನಲಾಗಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭಾರತೀಯ ರೈಲ್ವೆಯಿಂದ ಜೂನ್ 21ಕ್ಕೆ ಶ್ರೀರಾಮಾಯಣ ಯಾತ್ರಾ ರೈಲು ಪ್ರಾರಂಭ

ಲೈಸೆನ್ಸ್ ಇಲ್ಲದ 9 ನಾಡ ಬಂದೂಕು ಸೀಜ್ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ಪಾಲಾಕ್ಷಪ್ಪ ಮನೆಯಲ್ಲಿದ್ದ ಲೈಸೆನ್ಸ್ ಇಲ್ಲದ 9 ನಾಡ ಬಂದೂಕು ಜಪ್ತಿ ಮಾಡಲಾಗಿದೆ. ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ಪಾಲಾಕ್ಷಪ್ಪನನ್ನೂ ಸಹ ಪೊಲೀಸರು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸರ ಕಾರ್ಯಾಚರಣೆ, ನಾಲ್ವರು ಕುರಿಗಳ್ಳರ ಬಂಧ‌ನ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಕುರಿಗಳ್ಳರನ್ನು ಬಂಧಿಸಿದ್ದಾರೆ. ಕುರಿಗಳ್ಳರಾದ ದೊಡ್ಡೇಶ್ ಗಿರಿಯಾಪುರ(34), ಪ್ರಭು ಸಾವೇಕರ್(27), ಸಂತೋಷ ತಳವಾರ(31) ಹಾಗೂ ನಟರಾಜ ಪೋತಲಕಟ್ಟೆ ಬಂಧಿತರು. ಹಾಗೂ ಕುರಿ ಕಳ್ಳತನ ಮಾಡಿ ಮಾರಾಟ ಮಾಡಿದ್ದ ಆರೋಪಿಗಳಿಂದ 14,500 ನಗದು ಹಾಗೂ ಕೃತ್ಯಕ್ಕೆ ಬಳಸಿದ ಮೂರು ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಲಾಹೋರ್​ನಲ್ಲಿ ಪೆಟ್ರೋಲ್ ಇಲ್ಲ, ಎಟಿಎಂನಲ್ಲಿ ಹಣವಿಲ್ಲ; ಶ್ರೀಲಂಕಾದಲ್ಲಿ ಪಾಕಿಸ್ತಾನದಲ್ಲೂ ಶುರುವಾಯ್ತ ಆರ್ಥಿಕ ಬಿಕ್ಕಟ್ಟು?

ಆರೋಪಿಗಳು ಯರಬಳ್ಳಿ ಗ್ರಾಮದ ಶಶಿಕುಮಾರ ಎಂಬ ರೈತನ ಮೂರು ಕುರಿ ಹಾಗೂ ಒಂದು ಮೇಕೆ ಮರಿ ಕಳ್ಳತನ ಮಾಡಿದ್ದರು. ಅಲ್ಲದೆ ಸುತ್ತಮುತ್ತಲಿನ‌ ಗ್ರಾಮಗಳಲ್ಲಿ ಕುರಿ ಕಳ್ಳತನ ಮಾಡಿ ದಾವಣಗೆರೆ ಸೇರಿದಂತೆ ವಿವಿಧ ಕಡೆ ಮಾರಾಟ ಮಾಡುತ್ತಿದ್ದರು.

Published On - 10:36 pm, Wed, 25 May 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ