Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆ, ಲ್ಯಾಬ್​ಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಕ್ಸ್​ರೇಗೆ ಇದಕ್ಕಿಂತ ಒಂದು ರೂ. ಹೆಚ್ಚು ನೀಡಬೇಕಿಲ್ಲ

CT Scan, X-Ray Cost: ದೇಶದಲ್ಲಿ ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ಕರ್ನಾಟಕವೇ ಅತ್ಯಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ತಜ್ಞರ ಅಂದಾಜಿನ ಪ್ರಕಾರ ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದರೆ ಜೂನ್​ ವೇಳೆಗೆ ರಾಜ್ಯ ಅತ್ಯಂತ ಗಂಭೀರಾವಸ್ಥೆಗೆ ತಲುಪಲಿದೆ.

ಖಾಸಗಿ ಆಸ್ಪತ್ರೆ, ಲ್ಯಾಬ್​ಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಕ್ಸ್​ರೇಗೆ ಇದಕ್ಕಿಂತ ಒಂದು ರೂ. ಹೆಚ್ಚು ನೀಡಬೇಕಿಲ್ಲ
ಸಾಂಕೇತಿಕ ಚಿತ್ರ
Follow us
guruganesh bhat
|

Updated on: May 07, 2021 | 3:48 PM

ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಹೆಚ್ಚುತ್ತಿರುವ ಕೊವಿಡ್ 19 ಸೋಂಕಿನ ನಡುವೆಯೇ ಖಾಸಗಿ ಆಸ್ಪತ್ರೆ ಮ್ತತು ಲ್ಯಾಬ್​ಗಳಿಗೆ ಸಿಟಿ ಸ್ಕ್ಯಾನ್ ಮತ್ತು ಎಕ್ಸ್​ರೇಗಳಿಗೆ ದರ ನಿಗದಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಪರೀಕ್ಷೆಯಲ್ಲಿ ಬಳಸುವ ಈ ಎರಡು ಪ್ರಕ್ರಿಯೆಗಳಿಗೆ ಇಂತಿಷ್ಟೇ ಹಣ ಪಡೆಯಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಮೂಗುದಾರ ಹಾಕಿದಂತಾಗಿದೆ. ಸಿಟಿ ಸ್ಕ್ಯಾನ್​ಗೆ ₹ 1500 ಮತ್ತು ಎಕ್ಸ್​ರೇಗೆ ₹250ನ್ನು ನಿಗದಿ ಮಾಡಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆದೇಶಿಸಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ಕೊವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ನಿನ್ನೆ ಸಂಜೆ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ವರದಿ ಪ್ರಕಾರ ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 49,058 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 328 ಜನರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 17,90,104ಕ್ಕೇರಿಕೆಯಾಗಿದೆ. ರಾಜಧಾನಿ ಬೆಂಗಳೂರು ನಗರವೊಂದರಲ್ಲೇ ಒಟ್ಟು 23,706 ಜನರಲ್ಲಿ ಇಂದು ಸೋಂಕು ಕಾಣಿಸಿಕೊಂಡಿದ್ದು 139 ಜನರ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿತರ ಪೈಕಿ 12,55,797 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮೃತಪಟ್ಟವರನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 17,212 ಜನರ ಸಾವನ್ನಪ್ಪಿದ್ದು, 5,17,075 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಇಂದು ಪತ್ತೆಯಾದ ಸೋಂಕಿತರನ್ನೂ ಸೇರಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,87,086ಕ್ಕೇರಿಕೆಯಾಗಿದೆ. ಈ ಪೈಕಿ 5,47,208 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 7,145 ಜನರ ಸಾವನ್ನಪ್ಪಿದ್ದು, 3,32,732 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಸಿರುವ ಅವಾಂತರ ಇಡೀ ವೈದ್ಯಕೀಯ ವ್ಯವಸ್ಥೆಯನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ ಪರೀಕ್ಷೆಗೆ ಒಳಪಟ್ಟ ಮಾದರಿಗಳ ಪೈಕಿ ಶೇ.29.83ರಷ್ಟು ಮಾದರಿಗಳಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಹೀಗೇ ಮುಂದುವರೆದಲ್ಲಿ ಸೋಂಕಿತರ ಪರಿಸ್ಥಿತಿ ಅಲ್ಪಾವಧಿಯಲ್ಲಿ ದ್ವಿಗುಣವಾಗುವ ಅಪಾಯವಿದೆ ಎಂದು ತಜ್ಞರು ಆತಂಕ ಹೊರಹಾಕಿದ್ದಾರೆ. ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ಮೇ 6ರ ಅಂತ್ಯಕ್ಕೆ ಕರ್ನಾಟಕದಲ್ಲಿ 5,17,095 ಕೊರೊನಾ ಪ್ರಕರಣಗಳು ಸಕ್ರಿಯವಾಗಿದ್ದು, ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಲ್ಲಿಯ ತನಕ 12,55,797 ಜನ ಗುಣಮುಖರಾಗಿದ್ದು, 17,212 ಜನ ಮೃತಪಟ್ಟಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ಕರ್ನಾಟಕವೇ ಅತ್ಯಧಿಕ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ತಜ್ಞರ ಅಂದಾಜಿನ ಪ್ರಕಾರ ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದರೆ ಜೂನ್​ ವೇಳೆಗೆ ರಾಜ್ಯ ಅತ್ಯಂತ ಗಂಭೀರಾವಸ್ಥೆಗೆ ತಲುಪಲಿದೆ. ಕರ್ನಾಟಕದಲ್ಲಿ ಹೊಸದಾಗಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಗುಣಮುಖರಾಗುತ್ತಿರುವವರ ಪ್ರಮಾಣಕ್ಕಿಂತ ಸುಮಾರು ಎರಡರಿಂದ ಎರಡೂವರೆ ಪಟ್ಟು ಅಧಿಕ ಇರುವುದರಿಂದ ವೈದ್ಯಕೀಯ ಸೌಲಭ್ಯಗಳ ಅಭಾವವೂ ಹೆಚ್ಚಾಗಿ ಕಾಡುತ್ತಿದೆ.

ಇದನ್ನೂ ಓದಿ: ಬಳ್ಳಾರಿಯ ವಿವಿಯಿಂದ ಕೊವಿಡ್ ಕೇರ್ ಸೆಂಟರ್; ಕೊರೊನಾ ಸೋಂಕಿತರ ನೆರವಿಗೆ ನಿಂತ ವಿಶ್ವವಿದ್ಯಾಲಯ

ಹಿಂಜರಿಯಬೇಡಿ, ಬೇಗ ಲಸಿಕೆ ಪಡೆಯಿರಿ; ಕೊವಿಡ್ ಲಸಿಕೆ ಪಡೆದ ಟೀಂ ಇಂಡಿಯಾದ ಮೊದಲ ಕ್ರಿಕೆಟಿಗ ಶಿಖರ್​ ಧವನ್

(Karnataka CT Scan X Ray Cost for private labs check rate here in Kannada)

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ