AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ 22,445 ಸೈಬರ್​ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ದಾಖಲು

ದೂರದಲ್ಲೆಲ್ಲೋ ಕುಳಿತು ಮೋಸದ ಜಾಲ ಬೀಸಿ, ಹಣ ಹೊಡೆಯುವ ಸೈಬರ್ ಅಪರಾಧಗಳಿಗೆ ಅಂತ್ಯವೇ ಇಲ್ಲವಾಗಿ ಹೋಗಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಈ ಸೈಬರ್ ಕಳ್ಳರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಬೆಳೆಯುತ್ತ ಹೊರಟಿದೆ. ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಂಡಿರುವವರ ಅಂಕಿ-ಅಂಶ ಈಗ ಲಭ್ಯವಾಗಿದೆ. ಒಂದು ವರ್ಷದ ಅವಧಿಯಲ್ಲಿ ಎಷ್ಟು ಜನ ಹಣ ಕಳೆದುಕೊಂಡಿದ್ದಾರೆ? ಇಲ್ಲಿದೆ ವಿವರ

2024ರಲ್ಲಿ 22,445 ಸೈಬರ್​ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ದಾಖಲು
ಸಾಂದರ್ಭಿಕ ಚಿತ್ರ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Feb 17, 2025 | 9:52 AM

Share

ಧಾರವಾಡ, ಫೆಬ್ರವರಿ 17: ಕರ್ನಾಟಕದಲ್ಲಿ (Karnataka) ಕಳೆದ ಒಂದು ವರ್ಷದಲ್ಲಿ ಒಟ್ಟು 22,445 ಸೈಬರ್​ ವಂಚನೆ (Cyber Crime) ಪ್ರಕರಣಗಳು ದಾಖಲಾಗಿವೆ. 2024ರಲ್ಲಿ ಆನ್ ಲೈನ್ ಮೂಲಕ ಒಟ್ಟು 298 ಕೋಟಿ ರೂಪಾಯಿ ಹಣವನ್ನು ಜನರು ಕಳೆದುಕೊಂಡಿದ್ದಾರೆ. ಟಿವಿ9ಗೆ ಲಭ್ಯವಾಗಿರುವ ಎನ್​. ಸಿ. ಆರ್. ಪಿ. ಪೋರ್ಟಲ್​ನ ಅಂಕಿ-ಅಂಶ ಪ್ರಕಾರ ದೇಶಾದ್ಯಂತ 2024ರಲ್ಲಿ ಒಟ್ಟು 7,79,435 ಸೈಬರ್ ವಂಚನೆ ಪ್ರರಕರಣಗಳು ದಾಖಲಾಗಿವೆ.

ಅದರಲ್ಲಿ ಒಟ್ಟು 22,445 ಪ್ರಕರಣಗಳು ಕರ್ನಾಟಕದಲ್ಲಿ ನಡೆದಿದ್ದು, ಇದರಲ್ಲಿ 8677 ಆರೋಪಿಗಳು ಪತ್ತೆಯಾಗಿದ್ದರೂ ಕೇವಲ 643 ವಂಚಕರು ಮಾತ್ರ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಸೈಬರ್ ಕಳ್ಳರನ್ನು ಬೆನ್ನತ್ತಿ ಹೋಗಿ ಹಿಡಿಯೋದೇ ದೊಡ್ಡ ಸವಾಲಿನ ಕೆಲಸವಾಗಿದೆ. ಕೇವಲ ದೇಶದ ನಾನಾ ಕಡೆಗಷ್ಟೇ ಅಲ್ಲದೇ ದುಬೈ, ಕಾಂಬೋಡಿಯಾ, ಥೈಲ್ಯಾಂಡ್, ಲಾವೋಸ್, ಮ್ಯಾನ್ಮಾರ್, ಹಾಂಗ್​ಕಾಂಗ್, ಚೀನಾ ಮೂಲದ ಸೈಬರ್ ಅಪರಾಧಿಗಳು ಇದ್ದಾರೆ. ಹೀಗಾಗಿ ಜನ ಈ ವಿಷಯದಲ್ಲಿ ಜಾಗೃತ ಆಗಬೇಕು ಎಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಇನ್ನು, ಸೈಬರ್ ಅಪರಾಧಗಳಲ್ಲಿ ಡಿಜಿಟಲ್ ಅರೆಸ್ಟ್​ನಿಂದ ಹಿಡಿದು ನಿಮಗೆ ಬಹುಮಾನ ಬಂದಿದೆ ಅಂತ, ಬಂಪರ್ ಆಫರ್​ ಇದೆ ಅಂತ ವಂಚಿಸುವುದು ಸಾಮಾನ್ಯವಾಗಿದೆ. ಡಿಜಿಟಲ್ ಅರೆಸ್ಟ್ ಬಗ್ಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರೇ ತಮ್ಮ ಮನ್ ಕಿ ಬಾತ್​ನಲ್ಲಿ ಪ್ರಸ್ತಾಪಿಸಿ, ಜನರು ಜಾಗೃತರಾಗಿ ಇರುವಂತೆ ವಿನಂತಿಸಿಕೊಂಡಿದ್ದರು. ಮಾತ್ರವಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಈ ಸೈಬರ್ ವಂಚಕರ ಬಗ್ಗೆ ಜಾಗೃತಿಯ ಜಾಹೀರಾತುಗಳು ಬರುತ್ತಲೇ ಇವೆ. ಆದರೂ, ಈ ಸೈಬರ್ ಕಳ್ಳರ ಮಾತಿಗೆ ಮರುಳಾಗಿ ಜನ ಹಣ ಕಳೆದುಕೊಳ್ಳುವುದು ಮಾತ್ರ ನಿಲ್ಲುತ್ತಿಲ್ಲ ಎಂದು ಪೊಲೀಸ್​ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು

ಅದರಲ್ಲಿಯೂ ನಗರ ಪ್ರದೇಶದ ಸುಶಿಕ್ಷಿತರು, ನೌಕರರೇ ಈ ಸೈಬರ್ ಕಳ್ಳರ ಜಾಲಕ್ಕೆ ಮರುಳಾಗುತ್ತಿರುವುದು ವಿಪರ್ಯಾಸವೆ ಸರಿ. ಹೀಗಾಗಿ, ಯಾರೇ ಸೈಬರ್ ಕಳ್ಳರು ಕರೆ ಮಾಡಿದರೂ, ನಮಗೆ ಎಲ್ಲ ಗೊತ್ತಿದೆ ಎನ್ನುವ ರೀತಿಯಲ್ಲಿ ಮಾತನಾಡಬಾರದು. ಈ ಮೂಲಕ ಅವರ ಮಾತು, ಭಾಷೆ, ಗೊತ್ತಿದ್ದೂ ಗೊತ್ತಿಲ್ಲದಂತೆ ಜಾಣತನ ತೋರಿಸಬೇಕು ಎಂದು ಪೊಲೀಸ್​ ಅಧಿಕಾರಿಗಳು ಸಲಹೆಗಳನ್ನು ನೀಡಿದರು.

ಮೋಸ ಹೋಗುವವರು ಇರೋವರೆಗೂ ಮೋಸ ಮಾಡೋರು ಇದ್ದೆ ಇರುತ್ತಾರೆ ಅನ್ನೋ ಮಾತು ಈ ಸೈಬರ್ ಕಳ್ಳರ ವಿಷಯದಲ್ಲಿ ಸತ್ಯವಾಗಿದೆ. ಇದೇ ಕಾರಣಕ್ಕೆ ಜನರು ಸೈಬರ್ ಕಳ್ಳರ ಬಗ್ಗೆ ಹೆಚ್ಚು ಜಾಗೃತಿವಹಿಸಬೇಕಾದ ಅಗತ್ಯವಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್