ಇಂದು 2000 ಗಡಿ ದಾಟಿಯೇ ಬಿಟ್ಟಿತು ಸೋಂಕಿತರ ಸಂಖ್ಯೆ, ಮೃತಪಟ್ಟವರು 54
ಬೆಂಗಳೂರು: ಕರುನಾಡನ್ನು ಕೊರೊನಾ ಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 2,062 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 1,148 ಕೇಸ್ಗಳು ಕೇವಲ ಬೆಂಗಳೂರಿನಲ್ಲೇ ವರದಿಯಾಗಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,877ಕ್ಕೇರಿದೆ. ರಾಜ್ಯದಲ್ಲಿ ಸೋಂಕಿಗೆ ಇಂದು 54 ಜನರು ಅಸುನೀಗಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ ಇಂದು 13 ಜನರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಇದೀಗ ಕರ್ನಾಟಕದಲ್ಲಿ ಸೋಂಕಿನಿಂದ ಮೃಪಟ್ಟವರ ಒಟ್ಟು ಸಂಖ್ಯೆ 470ಕ್ಕೆ […]
ಪ್ರಾತಿನಿಧಿಕ ಚಿತ್ರ
Follow us on
ಬೆಂಗಳೂರು: ಕರುನಾಡನ್ನು ಕೊರೊನಾ ಬಿಡದೇ ಕಾಡುತ್ತಿದೆ. ರಾಜ್ಯದಲ್ಲಿ ಇಂದು ಒಂದೇ ದಿನ 2,062 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 1,148 ಕೇಸ್ಗಳು ಕೇವಲ ಬೆಂಗಳೂರಿನಲ್ಲೇ ವರದಿಯಾಗಿದೆ. ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,877ಕ್ಕೇರಿದೆ.
ರಾಜ್ಯದಲ್ಲಿ ಸೋಂಕಿಗೆ ಇಂದು 54 ಜನರು ಅಸುನೀಗಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ ಇಂದು 13 ಜನರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಇದೀಗ ಕರ್ನಾಟಕದಲ್ಲಿ ಸೋಂಕಿನಿಂದ ಮೃಪಟ್ಟವರ ಒಟ್ಟು ಸಂಖ್ಯೆ 470ಕ್ಕೆ ಏರಿದೆ.