AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗೆ ಮುಡಾ ಉರುಳು ಮತ್ತಷ್ಟು ಬಿಗಿಯಾಗುತ್ತಿದ್ದಂತೆಯೇ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ

ಮುಡ ಪ್ರಕರಣದ ಆಳ ಉದ್ದ ಅಗಲ ಹೆಚ್ಚಾಗುತ್ತಿದ್ದ ಹಾಗೇ ರಾಜಕೀಯ ಬೆಳವಣಿಗೆಗಳೂ ಶುರುವಾಗಿವೆ. ಒಬ್ಬೊಬ್ಬರಾಗಿ ಸಚಿವರು ಮೀಟಿಂಗ್ ಸೇರತೊಡಗಿದ್ದು ಸರ್ಕಾರಕ್ಕೆ ಆತಂಕ ಶುರುವಾಗಿದ್ಯಾ ಎನ್ನೋ ಅನುಮಾನ ಮೂಡತೊಡಗಿದೆ. ಹೌದು ಇದಕ್ಕೆ ಪೂರಕವೆಂಬಂತೆ ಹಿರಿಯ ಸಚಿವರು ಗೌಪ್ಯ ಸಭೆಗಳನ್ನು ಮಾಡುತ್ತಿದ್ದಾರೆ.

ಸಿಎಂಗೆ ಮುಡಾ ಉರುಳು ಮತ್ತಷ್ಟು ಬಿಗಿಯಾಗುತ್ತಿದ್ದಂತೆಯೇ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ|

Updated on:Oct 02, 2024 | 5:57 PM

Share

ಬೆಂಗಳೂರು, (ಅಕ್ಟೋಬರ್ 02): ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದಿನೇ ದಿನೇ ಮುಡಾ ಹಗರಣ ಉರುಳು ಮತ್ತಷ್ಟು ಬಿಗಿಯಾಗುತ್ತಿದ್ದಂತೆಯೇ ಕಾಂಗ್ರೆಸ್​​ನಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿರುವ ಮಧ್ಯ ಸಿಎಂ ಹುದ್ದೆಯ ಆಕಾಂಕ್ಷಿಗಳಾದ ಡಿಕೆ ಶಿವಕುಮಾರ್ ಮತ್ತು ಡಾ ಜಿ ಪರಮೇಶ್ವರ್ ಅವರು ಗೌಪ್ಯ ಸಭೆ ನಡೆಸಿದ್ದರು. ಇದಾದ ಬೆನ್ನಲ್ಲೇ ಇದೀಗ ದಲಿತ ಸಚಿವರು ಸಭೆ ಮಾಡಿದ್ದು, ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಮೂಡಿಸಿದೆ.

ಸಿಎಂ ಸಿದ್ದರಾಮಯ್ಯ ತಾನು ಮನಸ್ಸಾಕ್ಷಿಯಂತೆ ಕೆಲಸ ಮಾಡುತ್ತಿದ್ದು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಆದರೆ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮಾತ್ರ ಹತ್ತು ಹಲವು ಅನುಮಾನ‌ ಮೂಡಿಸುತ್ತಿದೆ. ಸಿದ್ದರಾಮಯ್ಯ ವಿರುದ್ದ ಇ.ಡಿ ಪ್ರಕರಣ ದಾಖಲಾಗುತ್ತಿದ್ದಂತೆ ಸಚಿವರ ಸಭೆಗಳು ಶುರುವಾಗಿದೆ. ನಿನ್ನೆ ಸಂಜೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವ ಪರಮೇಶ್ವರ್, ಎಚ್ ಸಿ ಮಹದೇವಪ್ಪ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಮಹದೇವಪ್ಪ ಸರ್ಕಾರಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಮುಂದಿನ ರಾಜಕೀಯ ಹಾದಿ ಬಗ್ಗೆ ಸಮಾಲೋಚನೆ ನಡೆಸಿರುವ ಮೂರು ಸಚಿವರ ಮೀಟಿಂಗ್ ಭಾರೀ ಕುತೂಹಲ ಮೂಡಿಸಿದೆ.

ಇದನ್ನೂ ಒದಿ: ಎತ್ತಿನಹೊಳೆ ನೆಪದಲ್ಲಿ ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ: ಕುತೂಹಲಕ್ಕೆ ಕಾರಣವಾದ ಸಿಎಂ ಸ್ಥಾನ ಆಕಾಂಕ್ಷಿಗಳ ಮಾತುಕತೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಯಲ್ಲೂ ಪ್ರಕರಣ ದಾಖಲಾದ ಬಳಿಕ ಸಚಿವರಲ್ಲಿ ಆತಂಕ ಶುರುವಾದಂತಿದೆ. ಮುಂದೆ ಕೆಲವೇ ದಿನಗಳಲ್ಲಿ ರಾಜಕೀಯ ಸ್ಥಿತ್ಯಂತರದ ಆತಂಕ ತೆರೆ ಮರೆಯಲ್ಲಿ ಶುರುವಾಗಿದೆ. ಸಿಎಂ ಸಿದ್ದರಾಮಯ್ಯನವರ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆದಿದ್ದು, ಯಾರೂ ಬಹಿರಂಗವಾಗಿ ಹೇಳಿಕೊಳ್ಳಲು ಸಿದ್ದರಿಲ್ಲ. ಈ ನಿಟ್ಟಿನಲ್ಲಿ ತಂತ್ರಗಾರಿಕೆ ಮಾಡುವ ಸಂಬಂಧ ಸಭೆ ಸೇರಿದ್ದ ಮೂವರು ಸಚಿವರು ಮಾತುಕತೆ ಹೂರಣ ಏನು ಎಂಬುದು ಚರ್ಚೆಗೆ ಗ್ರಾಸವಾಗಿದೆ. ಮೊನ್ನೆಯಷ್ಟೇ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದ ಡಾ. ಜಿ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಎತ್ತಿನಹೊಳೆ ನೆಪ ಹೇಳಿದ್ದರು. ಪರಂ ಡಿಕೆಶಿ ಭೇಟಿ ಬಳಿಕ ಇದೀಗ ಸತೀಶ್ ಜಾರಕಿಹೊಳಿ ಪರಮೇಶ್ವರ ಹಾಗೂ ಮಹದೇವಪ್ಪ ಚರ್ಚೆ ನಡೆದಿದೆ. ಸರ್ಕಾರಕ್ಕೆ ಡ್ಯಾಮೇಜ್ ಆಗುವ ಸ್ಥಿತಿ ಬಂದರೆ ಹೇಗೆ ತಂತ್ರಗಾರಿಕೆ ಮಾಡಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂಬುದು ಮೂಲಗಳ ಮಾಹಿತಿ.

ದಲಿತ ಸಚಿವರು ಪ್ರತ್ಯೇಕ ಮಾತುಕತೆ ಬಳಿಕ ಸಿಎಂ ಸಿದ್ದರಾಮಯ್ಯ ಬಳಿ ತೆರಳಿದ್ದಾರೆ. ಶಕ್ತಿ ಭವನ ಕಚೇರಿಯಲ್ಲಿ ಡಿಸಿಎಂ ಡಿಕೆಶಿವಕುಮಾರ್, ಕಾನೂನು ಸಚಿವ ಎಚ್ ಕೆ ಪಾಟೀಲ್, ಬಸವರಾಜ ರಾಯರೆಡ್ಡಿ, ಕೆ ಎಚ್ ಮುನಿಯಪ್ಪ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪರಮೇಶ್ವರ್ ಮಾತುಕತೆ ಮುಂದುವರಿದಿದೆ. ಇ.ಡಿ ಕೇಸ್ ದಾಖಲಾದ ಬಳಿಕ ಸಿಎಂ ಕೂಡ ಅಷ್ಟು ರಿಲ್ಯಾಕ್ಸ್ ಆಗಿಲ್ಲ.

ಕಾಂಗ್ರೆಸ್ ನಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಒಂದೊಂದಾಗಿ‌ ಶುರುವಾಗಿದ್ದರೆ ಅತ್ತ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ನಿಶ್ಚಿತ ಎನ್ನುತ್ತಿದೆ. ಮುಂದಿನ ಕೆಲ ದಿನಗಳಲ್ಲಿ ತೀವ್ರ ಗತಿಯ ಬದಲಾವಣೆಗಳು ಆಗುವ ಸಾಧ್ಯತೆ ಎಂದು ಅನುಮಾನ ವ್ಯಕ್ತಪಡಿಸಿರುವ ಬಿವೈ ವಿಜಯೇಂದ್ರ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡುತ್ತಾರೆ ಎಂದಿದ್ದಾರೆ.

ಕಾಂಗ್ರೆಸ್ ನಲ್ಲಿ ಸದ್ಯಕ್ಕೆ ಎಲ್ಲವೂ ಬೂದಿ ಮುಚ್ಚಿದ ಕೆಂಡದಂತಿದೆ. ವ್ಯತಿರಿಕ್ತ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣು ನೆಟ್ಟಿರುವ ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ಹೆಚ್ ಸಿ ಮಹದೇವಪ್ಪ ರಣಾಂಗಣಕ್ಕೆ ಧುಮುಕಲು ಸಜ್ಜಾದಂತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:55 pm, Wed, 2 October 24

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ