Karnataka Dam Water Level: ಕೆಆರ್ಎಸ್ನಲ್ಲಿ ಕೇವಲ 13 ಟಿಎಂಸಿ ನೀರು, ಏ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಏಪ್ರಿಲ್ 07ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿರುವ ಜಲಾಶಯಗಳ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂನಲ್ಲಿ ಕೇವಲ 13.01 ಟಿಎಂಸಿ ನೀರು ಮಾತ್ರ ಇದೆ. ಇನ್ನು ರಾಜ್ಯದ ಅತಿ ದೊಡ್ಡ ಜಲಾಶಯ ಎಂಬ ಖ್ಯಾತಿ ಗಳಿಸಿರುವ ತುಂಗಭದ್ರಾ ಆಣೆಕಟ್ಟಿನಲ್ಲಿ ಕೇವಲ 4.29 ಟಿಎಂಸಿ ನೀರು ಇದೆ. ಇನ್ನು ರಾಜ್ಯದ ಆಲಮಟ್ಟಿ, ಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಏಪ್ರಿಲ್ 07ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 34.84 | 29.90 | 0 | 12222 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 4.29 | 5.00 | 0 | 1014 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 10.12 | 11.91 | 0 | 794 |
ಕೆ.ಆರ್.ಎಸ್ (KRS Dam) | 38.04 | 49.45 | 13.01 | 19.10 | 76 | 785 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 27.86 | 45.02 | 0 | 3153 |
ಕಬಿನಿ ಜಲಾಶಯ (Kabini Dam) | 696.13 | 19.52 | 9.03 | 6.50 | 66 | 800 |
ಭದ್ರಾ ಜಲಾಶಯ (Bhadra Dam) | 657.73 | 71.54 | 18.12 | 39.63 | 97 | 1578 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 23.95 | 13.45 | 0 | 4778 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 10.39 | 19.90 | 7 | 330 |
ವರಾಹಿ ಜಲಾಶಯ (Varahi Dam) | 594.36 | 31.10 | 5.91 | 6.40 | 0 | 747 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.19 | 2.86 | 185 | 200 |
ಸೂಫಾ (Supa Dam) | 564.00 | 145.33 | 47.61 | 64.83 | 71 | 5494 |
ಕರ್ನಾಟಕದಲ್ಲಿ ಈ ಬಾರಿ ಸಮರ್ಪಕವಾಗಿ ಮಳೆಯಾಗದೆ ಬರಗಾಲ ಆವರಿಸಿದೆ, ಹನಿ ನೀರಿಗೂ ಜನರು ಪರದಾಡುತ್ತಿದ್ದಾರೆ. ತಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಶಾಖಕ್ಕೆ ಜನರು ಬಳಲುತ್ತಿದ್ದಾರೆ. ಜಲಾಶಯಗಳಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ