Karnataka Dam Water Level: ಆ.25ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

|

Updated on: Aug 25, 2023 | 6:56 AM

ಕರ್ನಾಟಕದ ಜಲಾಶಯಗಳ ಆಗಸ್ಟ್ 25ರ ನೀರಿನ ಮಟ್ಟ: ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.25ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಕೆಆರ್​​ಎಸ್​ ಜಲಾಶಯ
Follow us on

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ (Monsoon Rain) ಅದುಕೊಂಡಷ್ಟು ಸುರಿಯಲಿಲ್ಲ. ಜುಲೈ ಮೊದಲೆರಡು ವಾರ ಭಾರಿ ಮಳೆಯಾಗಿ ರೈತರ ಮೊಗದಲ್ಲಿ ಸಂತಸ ಮೂಡಿಸಿತ್ತು. ಆದರೆ ಜುಲೈ ಕೊನೆ ವಾರ ಮತ್ತು ಆಗಸ್ಟ್​ ತಿಂಗಳಲ್ಲಿ ಮಳೆ ಇಲ್ಲಿದೆ ಬಳೆಗಳು ಒಣಗುತ್ತಿವೆ. ಇದರಿಂದ ರೈತ ಚಿಂತಾಕ್ರಾಂತನಾಗಿದ್ದಾನೆ. ಇನ್ನು ಮಳೆ ಕೈ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಒಳಹರಿವು ಕೂಡ ಕಡಿಮೆಯಾಗುತ್ತಿದೆ. ಡ್ಯಾಂಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಯಾಗುತ್ತಿದೆ.  ಹಾಗಾದರೆ ಆಗಸ್ಟ್‌ 25ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಯಾವ ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 122.83 117.38 0 1012
ತುಂಗಭದ್ರಾ ಜಲಾಶಯ (Tungabhadra Dam) 497.71 105.79 81.88 102.01 2032 10730
ಮಲಪ್ರಭಾ ಜಲಾಶಯ (Malaprabha Dam) 633.80 37.73 23.01 28.55 894 894
ಕೆ.ಆರ್.ಎಸ್ (KRS Dam) 38.04 49.45 25.42 49.37 3491 13336
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 72.91 135.20 3425 7790
ಕಬಿನಿ ಜಲಾಶಯ (Kabini Dam) 696.13 19.52 14.67 19.43 970 3325
ಭದ್ರಾ ಜಲಾಶಯ (Bhadra Dam) 657.73 71.54 48.57 68.62 1533 3223
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.46 43.35 908 4500
ಹೇಮಾವತಿ ಜಲಾಶಯ (Hemavathi Dam) 890.58 37.10 27.61 36.86 1077 5300
ವರಾಹಿ ಜಲಾಶಯ (Varahi Dam) 594.36 31.10 10.41 20.73 427 2619
ಹಾರಂಗಿ ಜಲಾಶಯ (Harangi Dam)​​ 871.38 8.50 8.28 7.49 1370 1612
ಸೂಫಾ (Supa Dam) 564.00 145.33 79.62 89.84 3251 5367

ಸದ್ಯ ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಜಲಾಶಯಗಳಲ್ಲಿನ ನೀರಿನ ಮಟ್ಟವು ಪ್ರಸ್ತುತ ಪೂರ್ಣ ನೀರಿನ ಸಂಗ್ರಹ ಸಾಮರ್ಥ್ಯಕ್ಕಿಂತ ಕಡಿಮೆ ಇದೆ. ಹಾಗೂ ಆಲಮಟ್ಟಿ, ಕಬಿನಿ, ಘಟಪ್ರಭಾ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳ ಮಟ್ಟವು ಅವುಗಳ ಪೂರ್ಣ ಸಾಮರ್ಥ್ಯದ ಅರ್ಧದಷ್ಟು ಮಾತ್ರ ಇರುವುದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ