AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಆ.30ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ್ 30ರ ನೀರಿನ ಮಟ್ಟ: ತುಂಗಭದ್ರಾ, ಮಲಪ್ರಭಾ, ಕೆಆರ್‌ಎಸ್, ಲಿಂಗನಮಕ್ಕಿ, ಭದ್ರಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.30ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ತುಂಗಭದ್ರಾ ಜಲಾಶಯ
ವಿವೇಕ ಬಿರಾದಾರ
|

Updated on: Aug 30, 2023 | 6:46 AM

Share

ಪೆಸಿಫಿಕ್ ಸಾಗರದಲ್ಲಿ ಉಂಟಾಗಿರುವ ಎಲ್‌ನಿನೋ ಪರಿಣಾಮವಾಗಿ ಮುಂಗಾರು ಮಳೆ (Monsoon) ಕುಂಠಿತಗೊಂಡಿದೆ. ಆಗಸ್ಟ್‌ನಲ್ಲಿ ಈವರೆಗೂ ಶೇ.32ರಷ್ಟು ಮಳೆ ಕೊರತೆ ಉಂಟಾಗಿದ್ದು, ಇದು 122 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ದಾಖಲಾದ ಗರಿಷ್ಠ ಬರ ಎನಿಸಿಕೊಂಡಿದೆ. 1901ರಲ್ಲಿ ಇದಕ್ಕಿಂತ ಹೆಚ್ಚು ಮಳೆ ಕೊರತೆ ಉಂಟಾಗಿತ್ತು ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಹಾಗಾದರೆ ಆಗಸ್ಟ್‌ 30 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 121.96 122.08 0 451
ತುಂಗಭದ್ರಾ ಜಲಾಶಯ (Tungabhadra Dam) 497.71 105.79 78.50 104.10 106 7016
ಮಲಪ್ರಭಾ ಜಲಾಶಯ (Malaprabha Dam) 633.80 37.73 22.85 36.62 0 894
ಕೆ.ಆರ್.ಎಸ್ (KRS Dam) 38.04 49.45 24.27 49.42 1891 2343
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 71.24 135.81 3376 6168
ಕಬಿನಿ ಜಲಾಶಯ (Kabini Dam) 696.13 19.52 13.61 19.51 1630 4025
ಭದ್ರಾ ಜಲಾಶಯ (Bhadra Dam) 657.73 71.54 47.44 70.23 352 3222
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.10 51.00 993 2859
ಹೇಮಾವತಿ ಜಲಾಶಯ (Hemavathi Dam) 890.58 37.10 25.71 37.01 822 5470
ವರಾಹಿ ಜಲಾಶಯ (Varahi Dam) 594.36 31.10 9.92 21.20 224 704
ಹಾರಂಗಿ ಜಲಾಶಯ (Harangi Dam)​​ 871.38 8.50 7.82 7.73 404 1700
ಸೂಫಾ (Supa Dam) 564.00 145.33 78.65 92.11 2341 3039

ಆಗಸ್ಟ್‌ನಲ್ಲಿ ಒಟ್ಟಾರೆ 25,9 ಸೆಂ.ಮೀ. ಮಳೆಯಾಗಿದೆ. ಇದು ನಿಗದಿತ ಪ್ರಮಾಣಕ್ಕಿಂತ ಶೇ.30ರಷ್ಟು ಕಡಿಮೆಯಾಗಿದೆ. 2005ರಲ್ಲಿ ಶೇ.25, 1965ರಲ್ಲಿ ಶೇ.24.6, 1920ರಲ್ಲಿ ಶೇ.24.4, 1913ರಲ್ಲಿ ಶೇ.24ರಷ್ಟು ಮಳೆ ಕೊರತೆ ಉಂಟಾಗಿತ್ತು ಎಂದು ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ