Karnataka Dam Water Level: ಡಿ.14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Dec 14, 2023 | 7:33 AM

ಕರ್ನಾಟಕದ ಜಲಾಶಯಗಳ ಡಿಸೆಂಬರ್ 14ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us on

ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚುತ್ತಿದೆ. ಕೆಲವು ಕಡೆ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಮಡಿಕೇರಿ, ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇದ್ದು, ಕೊಂಚ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸದ್ಯ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿರುವ ಕಾರಣ ಡ್ಯಾಂಗೆ ನೀರು ಹರಿದು ಬರುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 13ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 59.22 115.87 0 1944
ತುಂಗಭದ್ರಾ ಜಲಾಶಯ (Tungabhadra Dam) 497.71 105.79 11.93 86.70 520 1866
ಮಲಪ್ರಭಾ ಜಲಾಶಯ (Malaprabha Dam) 633.80 37.73 16.55 30.33 0 194
ಕೆ.ಆರ್.ಎಸ್ (KRS Dam) 38.04 49.45 20.16 42.72 1092 577
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 59.43 110.35 1255 2472
ಕಬಿನಿ ಜಲಾಶಯ (Kabini Dam) 696.13 19.52 13.66 12.34 181 300
ಭದ್ರಾ ಜಲಾಶಯ (Bhadra Dam) 657.73 71.54 35.31 66.79 594 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.22 42.44 0 131
ಹೇಮಾವತಿ ಜಲಾಶಯ (Hemavathi Dam) 890.58 37.10 15.28 27.75 912 1000
ವರಾಹಿ ಜಲಾಶಯ (Varahi Dam) 594.36 31.10 10.92 18.27 122 0
ಹಾರಂಗಿ ಜಲಾಶಯ (Harangi Dam)​​ 871.38 8.50 3.56 3.43 134 350
ಸೂಫಾ (Supa Dam) 564.00 145.33 73.07 97.39 88 747

ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:28 am, Thu, 14 December 23