Karnataka Dam Water Level: ಡಿ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಡಿಸೆಂಬರ್ 20ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ತೀರ ಕಡಿಮೆಯಾಗಿದ್ದು ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದೆ. ಇನ್ನು ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ವರಣನ ಕೃಪೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಸರಿಯಾದ ಮಳೆ ಇಲ್ಲದೆ ಕೆಲವು ಜಲಾಶಯಗಳಿಗೆ ಒಳಹರಿವು ಸಂಪೂರ್ಣ ಸ್ಥಗಿತವಾಗಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಡಿಸೆಂಬರ್ 20ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 58.06 | 103.77 | 0 | 2444 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 11.10 | 84.06 | 0 | 1982 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 16.46 | 28.89 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 20.36 | 43.40 | 1177 | 574 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 58.19 | 108.01 | 597 | 2471 |
ಕಬಿನಿ ಜಲಾಶಯ (Kabini Dam) | 696.13 | 19.52 | 13.56 | 12.19 | 242 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 35.35 | 66.94 | 201 | 302 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 40.16 | 42.15 | 0 | 131 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 15.22 | 27.02 | 612 | 700 |
ವರಾಹಿ ಜಲಾಶಯ (Varahi Dam) | 594.36 | 31.10 | 10.49 | 18.01 | 46 | 290 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.41 | 3.33 | 175 | 600 |
ಸೂಫಾ (Supa Dam) | 564.00 | 145.33 | 72.42 | 96.52 | 107 | 1090 |
ಡಿ.20ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳು, ಉತ್ತರ ಕರ್ನಾಟಕದ ಹಲವು ಭಾಗಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣ ಹವೆ ಇರಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮಾಹಿತಿ ನೀಡಿದೆ. ಆದರೆ ಡಿ.21 ರ ಗುರುವಾರದಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ