Karnataka Dam Water Level: ಡಿ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Dec 29, 2023 | 7:26 AM

ಕರ್ನಾಟಕದ ಜಲಾಶಯಗಳ ಡಿಸೆಂಬರ್ 29ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.29ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us on

ಕರ್ನಾಟಕದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆ ಬೀಳದೆ ಬರಗಾಲ ಆವರಿಸಿದೆ. ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಹೆಚ್ಚಿನ ಜಲಾಶಯಗಳಿಗೆ ಒಳಹರಿವು ಕುಂಟಿತವಾಗಿದೆ.  ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 29ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 56.43 94.50 0 1851
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.48 78.40 0 1424
ಮಲಪ್ರಭಾ ಜಲಾಶಯ (Malaprabha Dam) 633.80 37.73 16.19 27.23 0 194
ಕೆ.ಆರ್.ಎಸ್ (KRS Dam) 38.04 49.45 20.48 42.04 808 875
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 55.81 102.54 0 2444
ಕಬಿನಿ ಜಲಾಶಯ (Kabini Dam) 696.13 19.52 13.39 12.28 180 300
ಭದ್ರಾ ಜಲಾಶಯ (Bhadra Dam) 657.73 71.54 35.44 67.01 201 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 39.54 40.43 0 137
ಹೇಮಾವತಿ ಜಲಾಶಯ (Hemavathi Dam) 890.58 37.10 15.01 25.85 197 350
ವರಾಹಿ ಜಲಾಶಯ (Varahi Dam) 594.36 31.10 10.38 17.08 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.37 3.23 148 100
ಸೂಫಾ (Supa Dam) 564.00 145.33 71.44 93.29 0 618

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಪ್ರಕಾರ, 895 ಟಿಎಂಸಿ ಅಡಿ ನೀರನ್ನು ಹಿಡಿದಿಟ್ಟುಕೊಳ್ಳಬಲ್ಲ ಪ್ರಮುಖ ಜಲಾಶಯಗಳಲ್ಲಿ ಈಗ ಕೇವಲ 394 ಟಿಎಂಸಿ ಅಡಿ ನೀರು ಇದೆ. ಹೀಗಾಗಿ ಮುಂದಿನ ತಿಂಗಳುಗಳಲ್ಲಿ ರಾಜ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ