Karnataka Dam Water Level: ಡಿ.30ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Dec 30, 2023 | 6:50 AM

ಕರ್ನಾಟಕದ ಜಲಾಶಯಗಳ ಡಿಸೆಂಬರ್ 30ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಡಿ.30ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸೂಪಾ ಡ್ಯಾಂ
Follow us on

ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಶನಿವಾರ ಒಣಹವೆ ಬೀಸಲಿದೆ. ಇನ್ನು ಹಗಲಿನಲ್ಲಿ ಬಿರು ಬಿಸಿಲಿದ್ದರೇ ರಾತ್ರಿ ವೇಳೆ ಮೈ ಕೊರೆಯುವಷ್ಟು ಚಳಿ ಇದೆ. ರಾಜ್ಯದಲ್ಲಿ ವಾತಾವರಣ ದಿನದಿಂದ ದಿನಕ್ಕೆ ಬದಲಾಗುತ್ತಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level)  ಡಿಸೆಂಬರ್​ 30ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 56.27 94.36 0 1840
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.33 77.67 0 1795
ಮಲಪ್ರಭಾ ಜಲಾಶಯ (Malaprabha Dam) 633.80 37.73 16.15 27.06 0 444
ಕೆ.ಆರ್.ಎಸ್ (KRS Dam) 38.04 49.45 20.45 41.87 743 975
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 55.54 102.02 0 2496
ಕಬಿನಿ ಜಲಾಶಯ (Kabini Dam) 696.13 19.52 13.38 12.32 242 300
ಭದ್ರಾ ಜಲಾಶಯ (Bhadra Dam) 657.73 71.54 35.44 67.01 201 201
ಘಟಪ್ರಭಾ ಜಲಾಶಯ (Ghataprabha Dam) 662.91 51.00 39.55 37.96 0 129
ಹೇಮಾವತಿ ಜಲಾಶಯ (Hemavathi Dam) 890.58 37.10 15.00 25.71 263 350
ವರಾಹಿ ಜಲಾಶಯ (Varahi Dam) 594.36 31.10 10.38 16.94 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.37 3.23 142 100
ಸೂಫಾ (Supa Dam) 564.00 145.33 71.33 92.85 0 1289

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:49 am, Sat, 30 December 23