Karnataka Dam Water Level: ನ.01ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ನವೆಂಬರ್ 01ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಮಳೆಯ (Karnataka Rain) ಕೊರತೆ ಉಂಟಾಗಿ ಬರಗಾಲ ಆವರಿಸಿದೆ. ಕರ್ನಾಟಕದ 195 ತಾಲೂಕುಗಳಲ್ಲಿ ಬರಗಾಲವಿದೆ. ಅಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಮಳೆಯಾಗದೆ ನದಿಗಳು ನೀರಿಲ್ಲದೆ ಬತ್ತುತ್ತಿವೆ. ಉತ್ತರ ಕರ್ನಾಟಕದ ಪ್ರಮುಖ ಜಲಾಶಯವಾದ ಆಲಮಟ್ಟಿಯಲ್ಲಿ ದಿನದಿಂದ ದಿನಕ್ಕೆ ನೀರು ಕಡಿಯಾಗುತ್ತಿದ್ದು, ರೈತರಲ್ಲಿ ಆತಂಕ ಹೆಚ್ಚಿಸಿದೆ. ಇನ್ನು ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯವಾದ ಕೆಆರ್ಎಸ್ನಲ್ಲೂ ನೀರಿಲ್ಲದೆ, ಕಾವೇರಿ ಕೊಳ್ಳದ ಸಂಕಷ್ಟ ಎದುರಾಗಿದೆ ಹಾಗಾದರೆ ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಅಕ್ಟೋಬರ್ 31 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 91.26 | 123.08 | 0 | 15393 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 32.95 | 105.06 | 0 | 9203 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 18.25 | 37.73 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 22.39 | 49.12 | 531 | 567 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 64.68 | 131.43 | 3270 | 3140 |
ಕಬಿನಿ ಜಲಾಶಯ (Kabini Dam) | 696.13 | 19.52 | 13.28 | 18.35 | 258 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 37.77 | 70.80 | 354 | 3236 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 40.74 | 51.00 | 0 | 1662 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 16.98 | 36.14 | 535 | 5970 |
ವರಾಹಿ ಜಲಾಶಯ (Varahi Dam) | 594.36 | 31.10 | 10.91 | 21.92 | 258 | 258 |
ಹಾರಂಗಿ ಜಲಾಶಯ (Harangi Dam) | 871.38 | 8.50 | 5.68 | 6.80 | 111 | 1750 |
ಸೂಫಾ (Supa Dam) | 564.00 | 145.33 | 74.91 | 104.31 | 770 | 3124 |
ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಬೆಳಗಾವಿ, ಬೀದರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ