Karnataka Dam Water Level: ನ.04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 04ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.04ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಸೂಫಾ ಡ್ಯಾಂ

Updated on: Nov 04, 2023 | 6:56 AM

ರಾಜ್ಯದಲ್ಲಿ ಬರದ ಛಾಯೆ ಮುಂದುವರೆದಿದ್ದು ರೈತರು ಸಂಕಷ್ಟದಲ್ಲಿದ್ದಾರೆ (Karnataka Rains). ಕಾಂಗ್ರೆಸ್ ಸರ್ಕಾರ 195 ತಾಲೂಕುಗಳನ್ನ ಬರ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರೀಕ್ಷೆಯಂತೆ ಮಳೆಯಾಗಿಲ್ಲ. ಈ ಪರಿಣಾಮ ತರಕಾರಿ ಬೆಲೆಯೂ ಗಗನಕ್ಕೇರಿದೆ. ದಿನೇ ದಿನೇ ಡ್ಯಾಂಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 04 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 87.36 123.08 0 14756
ತುಂಗಭದ್ರಾ ಜಲಾಶಯ (Tungabhadra Dam) 497.71 105.79 30.56 104.30 0 9231
ಮಲಪ್ರಭಾ ಜಲಾಶಯ (Malaprabha Dam) 633.80 37.73 18.18 37.73 0 194
ಕೆ.ಆರ್.ಎಸ್ (KRS Dam) 38.04 49.45 22.34 48.81 505 567
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 64.19 129.84 772 2854
ಕಬಿನಿ ಜಲಾಶಯ (Kabini Dam) 696.13 19.52 13.23 17.96 182 300
ಭದ್ರಾ ಜಲಾಶಯ (Bhadra Dam) 657.73 71.54 37.07 70.62 427 2858
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.71 51.00 0 133
ಹೇಮಾವತಿ ಜಲಾಶಯ (Hemavathi Dam) 890.58 37.10 15.63 35.56 369 5505
ವರಾಹಿ ಜಲಾಶಯ (Varahi Dam) 594.36 31.10 10.95 21.74 129 0
ಹಾರಂಗಿ ಜಲಾಶಯ (Harangi Dam)​​ 871.38 8.50 5.56 6.48 168 550
ಸೂಫಾ (Supa Dam) 564.00 145.33 74.60 103.62 480 1486

ಇಂದು ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ