Karnataka Dam Water Level: ನ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 15ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕೆಆರ್​ಎಸ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Nov 15, 2023 | 6:45 AM

ರಾಜ್ಯದಲ್ಲಿ ಮಳೆಯ (Karnataka Rain) ಕೊರತೆ ಉಂಟಾಗಿದೆ. ಇದರಿಂದ ನೀರಿಗಾಗಿ ಸಂಕಷ್ಟಗಳು ಶುರುವಾಗಿದೆ. ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 15 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 76.92 122.66 0 2581
ತುಂಗಭದ್ರಾ ಜಲಾಶಯ (Tungabhadra Dam) 497.71 105.79 25.06 99.70 5645 8135
ಮಲಪ್ರಭಾ ಜಲಾಶಯ (Malaprabha Dam) 633.80 37.73 17.27 36.83 0 1476
ಕೆ.ಆರ್.ಎಸ್ (KRS Dam) 38.04 49.45 24.04 47.93 2904 3912
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 64.78 124.45 437 1777
ಕಬಿನಿ ಜಲಾಶಯ (Kabini Dam) 696.13 19.52 14.65 16.43 179 800
ಭದ್ರಾ ಜಲಾಶಯ (Bhadra Dam) 657.73 71.54 36.57 68.65 612 314
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.58 51.00 0 141
ಹೇಮಾವತಿ ಜಲಾಶಯ (Hemavathi Dam) 890.58 37.10 16.50 33.69 1380 1300
ವರಾಹಿ ಜಲಾಶಯ (Varahi Dam) 594.36 31.10 11.02 20.70 0 0
ಹಾರಂಗಿ ಜಲಾಶಯ (Harangi Dam)​​ 871.38 8.50 5.67 5.26 159 100
ಸೂಫಾ (Supa Dam) 564.00 145.33 74.63 102.02 378 43

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಒಣಹವೆ ಬೀಸಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರ ಜಿಲ್ಲೆಗಳಲ್ಲೂ ಕೂಡ ಒಣಹವೆ ಬೀಸಿದರೇ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ