Karnataka Dam Water Level: ನ.16ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Nov 16, 2023 | 6:46 AM

ಕರ್ನಾಟಕದ ಜಲಾಶಯಗಳ ನವೆಂಬರ್​​​ 16ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.16ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಘಟಪ್ರಭಾ ಡ್ಯಾಂ
Follow us on

ರಾಜ್ಯದಲ್ಲಿ ಈ ಬಾರಿ ಮುಂಗಾರು ಆಗಮನ ವಿಳಂಬದಿಂದ ನೀರಿನ ಸಮಸ್ಯೆ ಎದುರಾಗಿದ್ದು. ಇದೀಗ ಹಿಂಗಾರು ಚುರುಕುಗೊಂಡಿದೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೂ ನಿರೀಕ್ಷೆಯಷ್ಟು ಮಳೆ ಇಲ್ಲದೆ ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 16 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 76.70 122.48 0 2581
ತುಂಗಭದ್ರಾ ಜಲಾಶಯ (Tungabhadra Dam) 497.71 105.79 24.64 99.35 3196 8009
ಮಲಪ್ರಭಾ ಜಲಾಶಯ (Malaprabha Dam) 633.80 37.73 17.14 36.69 0 1476
ಕೆ.ಆರ್.ಎಸ್ (KRS Dam) 38.04 49.45 23.86 47.73 2210 4161
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 64.68 123.99 1169 1757
ಕಬಿನಿ ಜಲಾಶಯ (Kabini Dam) 696.13 19.52 14.58 16.35 116 800
ಭದ್ರಾ ಜಲಾಶಯ (Bhadra Dam) 657.73 71.54 36.48 68.39 303 1404
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.56 51.00 0 133
ಹೇಮಾವತಿ ಜಲಾಶಯ (Hemavathi Dam) 890.58 37.10 16.47 33.50 1054 1300
ವರಾಹಿ ಜಲಾಶಯ (Varahi Dam) 594.36 31.10 11.02 20.61 0 0
ಹಾರಂಗಿ ಜಲಾಶಯ (Harangi Dam)​​ 871.38 8.50 5.62 5.21 41 600
ಸೂಫಾ (Supa Dam) 564.00 145.33 74.63 101.81 314 314

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ. ಇನ್ನು ಕರಾವಳಿಯ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 18ರವರೆಗೆ ಭಾರೀ ಮಳೆ ಬರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಮಳೆ ಬೀಳಲಿದೆ. ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ