ನವೆಂಬರ್ 22 ರಿಂದ 25 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ ಮತ್ತು ಕೋಲಾರದಲ್ಲಿ ಇಂದು ಮಳೆಯಾಗಲಿದೆ. ಇನ್ನು ಜಲಾಶಯಗಳಿಗೆ ಒಳಹರಿವು ಎಷ್ಟಿದೆ ಎಂಬ ವಿವರ ಇಲ್ಲಿದೆ. ಆಲಮಟ್ಟಿ, ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ 22 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 75.47 | 121.43 | 0 | 1881 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 20.19 | 96.64 | 298 | 9756 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 16.92 | 35.38 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 22.56 | 45.90 | 1397 | 4145 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 63.41 | 120.95 | 965 | 2854 |
ಕಬಿನಿ ಜಲಾಶಯ (Kabini Dam) | 696.13 | 19.52 | 13.90 | 15.49 | 211 | 1700 |
ಭದ್ರಾ ಜಲಾಶಯ (Bhadra Dam) | 657.73 | 71.54 | 35.23 | 66.88 | 493 | 2854 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 40.49 | 48.59 | 0 | 133 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 15.97 | 32.32 | 404 | 1300 |
ವರಾಹಿ ಜಲಾಶಯ (Varahi Dam) | 594.36 | 31.10 | 10.89 | 20.03 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 4.77 | 4.53 | 74 | 1950 |
ಸೂಫಾ (Supa Dam) | 564.00 | 145.33 | 74.44 | 100.78 | 439 | 774 |
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ರಾಯಚೂರು, ಬೀದರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಳಗಾವಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ