Karnataka Dam Water Level: ನ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Nov 23, 2023 | 6:43 AM

ಕರ್ನಾಟಕದ ಜಲಾಶಯಗಳ ನವೆಂಬರ್​​​ 23ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಲಪ್ರಭಾ ಡ್ಯಾಂ
Follow us on

ಕರ್ನಾಟಕದಲ್ಲಿ ಈ ಬಾರೀ ವಾಡಿಕೆಯಂತೆ ಮಳೆಯಾಗದ ಕಾರಣ ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಮಳೆ ಇಲ್ಲದೆ ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಇದೀಗ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮಳೆಯಾಗಿದೆ. ಬನ್ನಿ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ ​​23 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 74.58 121.26 0 10577
ತುಂಗಭದ್ರಾ ಜಲಾಶಯ (Tungabhadra Dam) 497.71 105.79 19.40 96.11 674 9769
ಮಲಪ್ರಭಾ ಜಲಾಶಯ (Malaprabha Dam) 633.80 37.73 16.90 35.11 0 194
ಕೆ.ಆರ್.ಎಸ್ (KRS Dam) 38.04 49.45 22.33 45.58 1572 4141
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 63.23 120.38 482 2801
ಕಬಿನಿ ಜಲಾಶಯ (Kabini Dam) 696.13 19.52 13.76 15.29 148 1900
ಭದ್ರಾ ಜಲಾಶಯ (Bhadra Dam) 657.73 71.54 35.03 66.68 504 2854
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.48 48.15 0 194
ಹೇಮಾವತಿ ಜಲಾಶಯ (Hemavathi Dam) 890.58 37.10 15.88 32.12 339 1300
ವರಾಹಿ ಜಲಾಶಯ (Varahi Dam) 594.36 31.10 10.91 19.93 244 0
ಹಾರಂಗಿ ಜಲಾಶಯ (Harangi Dam)​​ 871.38 8.50 4.58 4.46 44 2100
ಸೂಫಾ (Supa Dam) 564.00 145.33 74.35 100.53 170 1173

ನವೆಂಬರ್ 25 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ರಾಯಚೂರು, ಬೀದರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಳಗಾವಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ