Karnataka Dam Water Level: ನ.25ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 25ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.25ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Nov 25, 2023 | 6:48 AM

ಕರ್ನಾಟಕ ಬರಗಾಲದಿಂದ ಆವರಿಸಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಗೆ ಭಾರಿ ಹೊಡೆತ ಬಿದ್ದಿದೆ. ನದಿಗಳಿಗೆ ಒಳಹರಿವು ಶೂನ್ಯ ಹಂತಕ್ಕೆ ತಲುಪಿದೆ. ಇದರಿಂದ ರಾಜ್ಯಾದ್ಯಂತ ಇರುವ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ.  ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ ​​25 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 72.77 120.92 0 194
ತುಂಗಭದ್ರಾ ಜಲಾಶಯ (Tungabhadra Dam) 497.71 105.79 17.72 95.12 556 10811
ಮಲಪ್ರಭಾ ಜಲಾಶಯ (Malaprabha Dam) 633.80 37.73 16.87 34.58 0 194
ಕೆ.ಆರ್.ಎಸ್ (KRS Dam) 38.04 49.45 21.90 45.21 1488 3838
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.88 119.39 1516 2047
ಕಬಿನಿ ಜಲಾಶಯ (Kabini Dam) 696.13 19.52 13.60 14.90 548 850
ಭದ್ರಾ ಜಲಾಶಯ (Bhadra Dam) 657.73 71.54 34.83 66.38 203 203
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.46 47.27 0 141
ಹೇಮಾವತಿ ಜಲಾಶಯ (Hemavathi Dam) 890.58 37.10 15.70 31.76 208 1300
ವರಾಹಿ ಜಲಾಶಯ (Varahi Dam) 594.36 31.10 10.92 19.75 0 120
ಹಾರಂಗಿ ಜಲಾಶಯ (Harangi Dam)​​ 871.38 8.50 4.45 4.33 205 800
ಸೂಫಾ (Supa Dam) 564.00 145.33 74.06 99.99 356 2023

ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ