Karnataka Dam Water Level: ನ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Nov 26, 2023 | 6:56 AM

ಕರ್ನಾಟಕದ ಜಲಾಶಯಗಳ ನವೆಂಬರ್​​​ 26ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಲಪ್ರಭ ಡ್ಯಾಂ
Follow us on

ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಾಧಾರಣ ಮಳೆಯಾಗಿದೆ. ಇಂದು (ನ.26) ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಸಮರ್ಪಕವಾಗಿ ಮಳೆಯಾಗದೆ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್ ​​26 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 71.92 120.75 0 10361
ತುಂಗಭದ್ರಾ ಜಲಾಶಯ (Tungabhadra Dam) 497.71 105.79 16.86 94.74 506 10545
ಮಲಪ್ರಭಾ ಜಲಾಶಯ (Malaprabha Dam) 633.80 37.73 16.85 34.31 0 194
ಕೆ.ಆರ್.ಎಸ್ (KRS Dam) 38.04 49.45 21.72 45.06 1856 3836
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 62.61 118.97 0 2365
ಕಬಿನಿ ಜಲಾಶಯ (Kabini Dam) 696.13 19.52 13.56 14.74 424 850
ಭದ್ರಾ ಜಲಾಶಯ (Bhadra Dam) 657.73 71.54 34.85 66.28 400 203
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.44 46.81 0 133
ಹೇಮಾವತಿ ಜಲಾಶಯ (Hemavathi Dam) 890.58 37.10 15.60 31.54 273 1300
ವರಾಹಿ ಜಲಾಶಯ (Varahi Dam) 594.36 31.10 10.93 19.66 122 0
ಹಾರಂಗಿ ಜಲಾಶಯ (Harangi Dam)​​ 871.38 8.50 4.37 4.27 140 1000
ಸೂಫಾ (Supa Dam) 564.00 145.33 73.92 99.92 228 1889

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ