Karnataka Dam Water Level: ಅ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Oct 03, 2023 | 7:18 AM

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 03ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ವರಾಹಿ ಡ್ಯಾಂ
Follow us on

ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದೆ. ಕಾವೇರಿ ವಿಚಾರದಲ್ಲಿ ಸಿಡಿದೆದ್ದಿರುವ ಕರ್ನಾಟಕ ಜಲಸಂರಕ್ಷಣಾ ಸಮಿತಿ, ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವ ತನಕ ಚಳುವಳಿ ನಡೆಸುವುದಾಗಿ ಘೋಷಿಸಿದೆ. ಮತ್ತೊಂದೆಡೆ ಬರದ ಹಿನ್ನೆಲೆ ರಾಜ್ಯದ ಅನೇಕ ಪ್ರಮುಖ ಜಲಾಶಯಗಳು ಖಾಲಿಯಾಗಿವೆ. ಆದರೆ ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೊಂಚ ಸಮಾಧಾನ ತಂದಿದೆ. ಹಾಗಾದರೆ ಅಕ್ಟೋಬರ್​​ 03 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 108.66 123.08 11853 11853
ತುಂಗಭದ್ರಾ ಜಲಾಶಯ (Tungabhadra Dam) 497.71 105.79 55.74 104.62 1220 10111
ಮಲಪ್ರಭಾ ಜಲಾಶಯ (Malaprabha Dam) 633.80 37.73 20.63 37.73 0 1019
ಕೆ.ಆರ್.ಎಸ್ (KRS Dam) 38.04 49.45 21.28 47.73 4156 2179
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 69.09 140.42 11738 1657
ಕಬಿನಿ ಜಲಾಶಯ (Kabini Dam) 696.13 19.52 13.66 18.60 4564 1000
ಭದ್ರಾ ಜಲಾಶಯ (Bhadra Dam) 657.73 71.54 42.55 70.15 998 2769
ಘಟಪ್ರಭಾ ಜಲಾಶಯ (Ghataprabha Dam) 662.91 51.00 44.87 51.00 3889 181
ಹೇಮಾವತಿ ಜಲಾಶಯ (Hemavathi Dam) 890.58 37.10 18.76 36.70 3681 1300
ವರಾಹಿ ಜಲಾಶಯ (Varahi Dam) 594.36 31.10 11.09 23.23 1837 552
ಹಾರಂಗಿ ಜಲಾಶಯ (Harangi Dam)​​ 871.38 8.50 6.96 7.48 3156 1400
ಸೂಫಾ (Supa Dam) 564.00 145.33 78.16 104.67 13618 1874

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ