Karnataka Dam Water Level: ಅ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಅಕ್ಟೋಬರ್ 05ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಮತ್ತೊಂದೆಡೆ ಕಾವೇರಿ ವಿವಾದ ಭುಗಿಲೆದ್ದಿದ್ದು ಪ್ರತಿ ದಿನ ಪ್ರತಿಭಟನೆಗಳು ನಡೆಯತ್ತಿವೆ. ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಇದರಿಂದ ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ಭಾಗದ ರೈತರಿಗೆ ಆತಂಕ ಶುರುವಾಗಿದೆ. ಬರದ ಹಿನ್ನೆಲೆ ರಾಜ್ಯದ ಅನೇಕ ಪ್ರಮುಖ ಜಲಾಶಯಗಳು ಖಾಲಿಯಾಗಿವೆ. ಮಂಡ್ಯ, ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳ ಜೀವನಾಡಿಯಾದ ಕೃಷ್ಣರಾಜ ಸಾಗರ ಜಲಾಶಯದಲ್ಲಿ ನೀರಿನ ಪ್ರಮಾಣ 100ರ ಗಡಿ ದಾಟಿದೆ. ಹಾಗಾದರೆ ಅಕ್ಟೋಬರ್ 05 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 112.13 | 123.08 | 39064 | 11553 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 53.73 | 105.79 | 3702 | 9970 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 20.36 | 37.73 | 0 | 1019 |
ಕೆ.ಆರ್.ಎಸ್ (KRS Dam) | 38.04 | 49.45 | 23.09 | 47.84 | 9052 | 1482 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 70.26 | 139.75 | 4308 | 4112 |
ಕಬಿನಿ ಜಲಾಶಯ (Kabini Dam) | 696.13 | 19.52 | 14.85 | 18.52 | 3349 | 1000 |
ಭದ್ರಾ ಜಲಾಶಯ (Bhadra Dam) | 657.73 | 71.54 | 42.03 | 70.57 | 790 | 3244 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 46.92 | 51.00 | 5603 | 186 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 19.72 | 36.59 | 3418 | 1300 |
ವರಾಹಿ ಜಲಾಶಯ (Varahi Dam) | 594.36 | 31.10 | 11.31 | 23.15 | 514 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.25 | 7.16 | 1981 | 1400 |
ಸೂಫಾ (Supa Dam) | 564.00 | 145.33 | 79.94 | 104.78 | 4232 | 3173 |
ಇನ್ನು ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ