Karnataka Dam Water Level: ಅ.12ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಅಕ್ಟೋಬರ್ 12ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದ ಹಲವೆಡೆ ಬರದ ಪರಿಸ್ಥಿತಿ ಮುಂದುವರೆದಿದೆ. ಉತ್ತಮ ಮಳೆ ಇಲ್ಲದ ಕಾರಣ ಬೆಳೆ ಬೆಳೆಸಲು ಸಮಸ್ಯೆಗಳಾಗುತ್ತಿದ್ದು ಮತ್ತೊಂದೆಡೆ ಅಲ್ಫ ಸ್ವಲ್ಪ ಬೆಳೆದ ಬೆಳೆಗಳಿಗೂ ಲೋಡ್ ಶೆಡ್ಡಿಂಗ್ನಿಂದಾಗಿ ನೀರು ಬಿಡಲಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಇನ್ನೂ ಕೆಲವೆಡೆ ಕಳೆದ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ (Karnataka Rain). ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬರದ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿವೆ. ಬೀದರ್ನಲ್ಲಿ ನಿರಂತರ ಮಳೆಯಾಗುತ್ತಿದ್ದು ಕಾರಂಜಾ ಡ್ಯಾಂ ಬರ್ತಿಯಾಗಿದೆ. ಒಳಹರಿವು ಹೆಚ್ಚಾಗಿದ್ದರಿಂದ ಡ್ಯಾಂ ನ 6 ಗೇಟ್ ಗಳ ಪೈಕಿ 2 ಕ್ರಸ್ಟ್ ಗೇಟ್ ಗಳ ಮೂಲಕ 360 ಕ್ಯೂಸೆಕ್ ನೀರನ್ನ ಹರಿಬಿಡಲಾಗುತ್ತಿದೆ. ಹಾಗಾದರೆ ಅಕ್ಟೋಬರ್ 12 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 115.71 | 123.08 | 2371 | 485 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 49.40 | 105.79 | 1020 | 9392 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 20.01 | 37.73 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 23.32 | 48.84 | 5578 | 6165 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 68.60 | 137.19 | 3139 | 5949 |
ಕಬಿನಿ ಜಲಾಶಯ (Kabini Dam) | 696.13 | 19.52 | 14.93 | 18.40 | 2684 | 3550 |
ಭದ್ರಾ ಜಲಾಶಯ (Bhadra Dam) | 657.73 | 71.54 | 40.69 | 71.54 | 697 | 2861 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 47.93 | 50.84 | 1200 | 2295 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 20.10 | 36.33 | 2326 | 1300 |
ವರಾಹಿ ಜಲಾಶಯ (Varahi Dam) | 594.36 | 31.10 | 11.24 | 22.92 | 194 | 708 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.78 | 6.59 | 1939 | 1200 |
ಸೂಫಾ (Supa Dam) | 564.00 | 145.33 | 78.68 | 103.94 | 1020 | 4866 |
ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ