Karnataka Dam Water Level: ಅ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Oct 19, 2023 | 6:49 AM

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 19ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us on

ರಾಜ್ಯದಲ್ಲಿ ವಾಡಿಕೆಯಷ್ಟು ಮಳೆಯಾಗದೆ ಬರಗಾಲ ಆವರಿಸಿದೆ. ಒಂದೆಡೆ ಕುಡಿಯಲೂ ಸಹಿತ ನೀರು ಇಲ್ಲದೆ ಜನರು ಪರದಾಡುತ್ತಿದ್ದರೇ, ಮತ್ತೊಂದಡೆ ಕೃಷಿಕೆ ನೀರು ಇಲ್ಲಿದೆ ಅನ್ನದಾತ ಸಂಕಷ್ಟಕ್ಕೆ ಸಿಲುಕಿದ್ದಾನೆ. ರಾಜ್ಯದ ಡ್ಯಾಂಗಳಲ್ಲಿದ್ದ ನೀರು ದಿನದಿಂದ ದಿನಕ್ಕೆ ಕಾಲಿಯಾಗುತ್ತಿದೆ. ಮುಂದಿನ ಮಾರ್ಚವರೆಗು ಸದ್ಯ ಜಲಾಶಯಗಳಲ್ಲಿ ಇದ್ದ ನೀರನ್ನೇ ಬಳಕೆ ಮಾಡಿಕೊಳ್ಳಬೇಕು. ಆದರೆ ಜಲಾಶಯಗಳಲ್ಲಿ ಅಷ್ಟೊಂದು ಪ್ರಮಾಣದ ನೀರು ಇಲ್ಲ. ಹಾಗಾದರೆ ಅಕ್ಟೋಬರ್​​ 19 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 111.16 121.09 0 14988
ತುಂಗಭದ್ರಾ ಜಲಾಶಯ (Tungabhadra Dam) 497.71 105.79 43.81 105.30 657 10804
ಮಲಪ್ರಭಾ ಜಲಾಶಯ (Malaprabha Dam) 633.80 37.73 19.86 37.73 0 544
ಕೆ.ಆರ್.ಎಸ್ (KRS Dam) 38.04 49.45 23.62 49.45 4143 4558
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.42 136.42 2648 3995
ಕಬಿನಿ ಜಲಾಶಯ (Kabini Dam) 696.13 19.52 14.38 19.41 1432 1850
ಭದ್ರಾ ಜಲಾಶಯ (Bhadra Dam) 657.73 71.54 39.36 70.90 546 2039
ಘಟಪ್ರಭಾ ಜಲಾಶಯ (Ghataprabha Dam) 662.91 51.00 46.21 51.00 443 5351
ಹೇಮಾವತಿ ಜಲಾಶಯ (Hemavathi Dam) 890.58 37.10 20.70 36.86 1688 1300
ವರಾಹಿ ಜಲಾಶಯ (Varahi Dam) 594.36 31.10 10.97 22.63 294 680
ಹಾರಂಗಿ ಜಲಾಶಯ (Harangi Dam)​​ 871.38 8.50 7.62 6.92 745 1612
ಸೂಫಾ (Supa Dam) 564.00 145.33 76.68 104.63 1005 2718

ಮುಂದಿನ 24 ಗಂಟೆಗಳಲ್ಲಿ ಮೈಸೂರು, ಹಾಸನ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಮತ್ತು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 1-2 °C ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ