Karnataka Dam Water Level: ಅ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Oct 26, 2023 | 7:02 AM

ಕರ್ನಾಟಕದ ಜಲಾಶಯಗಳ ಅಕ್ಟೋಬರ್​​ 26ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಅ.26ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕಬಿನಿ ಡ್ಯಾಂ
Follow us on

ರಾಜ್ಯದಲ್ಲಿ ಸರಿಯಾದ ಸಮಯಕ್ಕೆ ಸರಿಯಾದ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆ ರಾಜ್ಯದಲ್ಲಿ ಬರದ ವಾತಾವರಣವಿದೆ (Karnataka Rain). ಮತ್ತೊಂದೆಡೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಜೊತೆಗೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಇಲ್ಲ. ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮುನ್ಸೂಚನೆ ಜನರನ್ನು ಮತ್ತಷ್ಟು ಆತಂಕಕ್ಕೆ ದೂಕಿದೆ. ಹಾಗಾದರೆ ಅಕ್ಟೋಬರ್​​ 26 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 100.49 122.48 0 17002
ತುಂಗಭದ್ರಾ ಜಲಾಶಯ (Tungabhadra Dam) 497.71 105.79 37.79 105.78 84 10078
ಮಲಪ್ರಭಾ ಜಲಾಶಯ (Malaprabha Dam) 633.80 37.73 18.66 37.73 0 1944
ಕೆ.ಆರ್.ಎಸ್ (KRS Dam) 38.04 49.45 22.44 49.45 1794 3441
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 65.95 134.16 629 2692
ಕಬಿನಿ ಜಲಾಶಯ (Kabini Dam) 696.13 19.52 13.49 19.13 263 1850
ಭದ್ರಾ ಜಲಾಶಯ (Bhadra Dam) 657.73 71.54 39.27 70.95 588 1214
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.16 51.00 0 4803
ಹೇಮಾವತಿ ಜಲಾಶಯ (Hemavathi Dam) 890.58 37.10 19.85 36.72 858 5016
ವರಾಹಿ ಜಲಾಶಯ (Varahi Dam) 594.36 31.10 10.98 22.30 244 0
ಹಾರಂಗಿ ಜಲಾಶಯ (Harangi Dam)​​ 871.38 8.50 6.55 7.53 143 1550
ಸೂಫಾ (Supa Dam) 564.00 145.33 75.51 105.25 0 543

ಅಕ್ಟೋಬರ್‌ 25 ರಿಂದ 28 ವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್‌ 29ರ ನಂತರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ , ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಸಿಕ್ಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ