Karnataka Dam Water Level: ಅ.28ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಅಕ್ಟೋಬರ್ 28ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮಳೆಯಾಗುತ್ತದೆ (Karnataka Rain) ಎಂಬ ಕನಸು ಕನಸಾಗಿಯೇ ಉಳಿದೆ. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಇಂದು ಒಣಹವೆ ಬೀಸಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಇಂದು ಮಳೆಯಾಗಲಿದೆ. ಮಳೆ ಇಲ್ಲದೆ ರಾಜ್ಯದ ಜಲಾಶಯಗಳಲ್ಲಿನ ನೀರು ಕಡಿಮೆಯಾಗುತ್ತಿದೆ. ಹಾಗಾದರೆ ಅಕ್ಟೋಬರ್ 28 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.6 | 123.08 | 97.27 | 123.08 | 0 | 18506 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 36.12 | 105.62 | 0 | 9358 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 18.43 | 37.73 | 0 | 1194 |
ಕೆ.ಆರ್.ಎಸ್ (KRS Dam) | 38.04 | 49.45 | 22.41 | 49.45 | 531 | 567 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 65.46 | 133.42 | 2052 | 4863 |
ಕಬಿನಿ ಜಲಾಶಯ (Kabini Dam) | 696.13 | 19.52 | 13.33 | 18.91 | 258 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 38.77 | 70.85 | 309 | 3238 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 42.19 | 51.00 | 0 | 5581 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 18.92 | 36.62 | 390 | 5850 |
ವರಾಹಿ ಜಲಾಶಯ (Varahi Dam) | 594.36 | 31.10 | 10.93 | 22.17 | 0 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 6.26 | 7.33 | 185 | 1850 |
ಸೂಫಾ (Supa Dam) | 564.00 | 145.33 | 75.54 | 105.07 | 876 | 876 |
ಅಕ್ಟೋಬರ್ 25 ರಿಂದ 28 ವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 29ರ ನಂತರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ , ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಸಿಕ್ಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ