Karnataka Dam Water Level: ಸೆ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Sep 02, 2023 | 7:16 AM

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 02ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.02ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹಿಡಕಲ್​ ಡ್ಯಾಂ
Follow us on

ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು (Karnataka Rain), ನೀರಿಲ್ಲದೆ ಜನರು ಪರದಾಡುವಂತಾಗಿದೆ. ಜಲಾಶಯಗಳಲ್ಲೂ ನೀರಿನ ಮಟ್ಟ ಕಡಿಮೆಯಾಗಿದೆ.  ಹಾಗಾದರೆ ಸೆಪ್ಟೆಂಬರ್​​​ 02 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 121.96 123.08 5767 1705
ತುಂಗಭದ್ರಾ ಜಲಾಶಯ (Tungabhadra Dam) 497.71 105.79 76.22 103.38 688 9810
ಮಲಪ್ರಭಾ ಜಲಾಶಯ (Malaprabha Dam) 633.80 37.73 22.32 37.73 0 2194
ಕೆ.ಆರ್.ಎಸ್ (KRS Dam) 38.04 49.45 23.08 48.42 1635 7230
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 69.48 136.58 1226 7561
ಕಬಿನಿ ಜಲಾಶಯ (Kabini Dam) 696.13 19.52 13.63 18.85 1852 2000
ಭದ್ರಾ ಜಲಾಶಯ (Bhadra Dam) 657.73 71.54 46.72 70.99 606 3222
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.19 51.00 2531 1134
ಹೇಮಾವತಿ ಜಲಾಶಯ (Hemavathi Dam) 890.58 37.10 24.41 36.86 861 5780
ವರಾಹಿ ಜಲಾಶಯ (Varahi Dam) 594.36 31.10 9.60 21.29 148 2484
ಹಾರಂಗಿ ಜಲಾಶಯ (Harangi Dam)​​ 871.38 8.50 7.46 7.95 522 1700
ಸೂಫಾ (Supa Dam) 564.00 145.33 77.82 92.99 1931 5395

ಜುಲೈ ಆರಂಭದ ಮೊದಲೆರಡು ವಾರ ಉತ್ತಮ ಮಳೆಯಾಗಿತ್ತು. ಆದರೆ ನಂತರದ ದಿನಗಳಲ್ಲಿ ಆಗಸ್ಟ್​​ ಅಂತ್ಯದವರೆಗೂ ಮಳೆಯಾಗದೆ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದೀಗ ಸೆಪ್ಟೆಂಬರ್​ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ರಾಜ್ಯಾದ್ಯಂತ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:02 am, Sat, 2 September 23