Karnataka Dam Water Level: ಸೆ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 05ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.05ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹಾರಂಗಿ ಡ್ಯಾಂ

Updated on: Sep 05, 2023 | 6:45 AM

ಕರ್ನಾಟಕದಾದ್ಯಂತ ಮುಂಗಾರು (Karnataka Rain) ಚುರುಕಾಗಿದ್ದು, ರಾಜ್ಯದಲ್ಲಿ ಸೆ.12ರ ವರೆಗೆ ಉತ್ತಮ ಮಳೆಯಾಗಲಿದೆ. ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಲ್ಲದೇ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಹಾಗಾದರೆ ಸೆಪ್ಟೆಂಬರ್​​​ 05 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 121.43 123.08 5086 15237
ತುಂಗಭದ್ರಾ ಜಲಾಶಯ (Tungabhadra Dam) 497.71 105.79 73.78 103.06 559 9126
ಮಲಪ್ರಭಾ ಜಲಾಶಯ (Malaprabha Dam) 633.80 37.73 21.88 37.73 0 1194
ಕೆ.ಆರ್.ಎಸ್ (KRS Dam) 38.04 49.45 22.28 49.26 4199 6231
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.30 137.50 2971 5060
ಕಬಿನಿ ಜಲಾಶಯ (Kabini Dam) 696.13 19.52 13.57 18.79 794 1000
ಭದ್ರಾ ಜಲಾಶಯ (Bhadra Dam) 657.73 71.54 46.01 70.41 400 3224
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.48 51.00 597 176
ಹೇಮಾವತಿ ಜಲಾಶಯ (Hemavathi Dam) 890.58 37.10 23.10 36.86 747 5800
ವರಾಹಿ ಜಲಾಶಯ (Varahi Dam) 594.36 31.10 9.10 21.45 371 1278
ಹಾರಂಗಿ ಜಲಾಶಯ (Harangi Dam)​​ 871.38 8.50 7.11 7.66 204 1735
ಸೂಫಾ (Supa Dam) 564.00 145.33 77.12 93.87 1208 2926

ಜುಲೈ ಆರಂಭದ ಮೊದಲೆರಡು ವಾರ ಉತ್ತಮ ಮಳೆಯಾಗಿತ್ತು. ಆದರೆ ನಂತರದ ದಿನಗಳಲ್ಲಿ ಆಗಸ್ಟ್​​ ಅಂತ್ಯದವರೆಗೂ ಮಳೆಯಾಗದೆ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದೀಗ ಸೆಪ್ಟೆಂಬರ್​ ತಿಂಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಡಿಕೆಗಿಂತಲೂ ಅಧಿಕ ಮಳೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ