Karnataka Dam Water Level: ಸೆ.14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Sep 14, 2023 | 7:01 AM

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 14ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.14ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಹೇಮಾವತಿ ಜಲಾಶಯ
Follow us on

ರಾಜ್ಯದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆ ಆಗದ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ಇನ್ನು ಮತ್ತೊಂದೆಡೆ ಬರಗಾಲದಲ್ಲಿಯೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಿದೆ. ಹಾಗೂ ಕಾವೇರಿಕೊಳ್ಳದ ಪ್ರಮುಖ ಜಲಾಶಯ ಹಾಸನದ ಹೇಮಾವತಿ ಜಲಾಶಯದ ನೀರು ಕೂಡ ಕುಸಿಯುತ್ತಿದೆ. ಕಳೆದ 1 ತಿಂಗಳಿನಿಂದ ಹೇಮಾವತಿ ಜಲಾಶಯದಿಂದ ಪ್ರತಿನಿತ್ಯ 6000 ಕ್ಯೂಸೆಕ್ ನೀರು ಹರಿಯುತ್ತಿದೆ. ತುಮಕೂರು, ಮಂಡ್ಯ ಭಾಗದ ನಾಲೆಗಳಿಗೆ 4700 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್​ಎಸ್ ಡ್ಯಾಂಗೆ ಪ್ರತಿನಿತ್ಯ 1200ರಿಂದ 1500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. 37 ಟಿಎಂಸಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 19 ಟಿಎಂಸಿ ನೀರು ಇದೆ. ರಾಜ್ಯಕ್ಕೆ ನೀರಿನ ಸಮಸ್ಯೆ ಎದುರಾಗುವ ಸೂಚನೆ ಸಿಕ್ಕಿದೆ. ಹಾಗಾದರೆ ಸೆಪ್ಟೆಂಬರ್​​​ 14 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 113.92 121.96 13093 3684
ತುಂಗಭದ್ರಾ ಜಲಾಶಯ (Tungabhadra Dam) 497.71 105.79 67.81 104.06 2164 10233
ಮಲಪ್ರಭಾ ಜಲಾಶಯ (Malaprabha Dam) 633.80 37.73 21.57 37.73 0 194
ಕೆ.ಆರ್.ಎಸ್ (KRS Dam) 38.04 49.45 21.09 49.23 2741 4498
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 66.93 141.42 2898 4996
ಕಬಿನಿ ಜಲಾಶಯ (Kabini Dam) 696.13 19.52 14.86 19.13 4605 3490
ಭದ್ರಾ ಜಲಾಶಯ (Bhadra Dam) 657.73 71.54 44.21 70.70 431 2491
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.87 50.87 1033 181
ಹೇಮಾವತಿ ಜಲಾಶಯ (Hemavathi Dam) 890.58 37.10 19.02 36.91 1069 6050
ವರಾಹಿ ಜಲಾಶಯ (Varahi Dam) 594.36 31.10 9.68 22.61 701 0
ಹಾರಂಗಿ ಜಲಾಶಯ (Harangi Dam)​​ 871.38 8.50 8.34 8.10 1067 800
ಸೂಫಾ (Supa Dam) 564.00 145.33 77.66 99.25 3037 3728

ಭದ್ರಾ ಜಲಾಶಯದಿಂದ ಸದ್ಯ ಈಗ ಬಲದಂಡೆ ಕಾಲುವೆಗೆ ನಿತ್ಯ 2300 ಕ್ಯೂಸೆಕ್ ಹಾಗೂ ಎಡದಂಡೆ ಕಾಲುವೆಗೆ 431 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಆನ್ ಆಫ್ ವ್ಯವಸ್ಥೆಯಡಿ 10 ದಿನಗಳ ಕಾಲ ನೀರು ಬಂದ್ ಮಾಡಿ 20 ದಿನಗಳ ಕಾಲ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಮಳೆ ಕೊರತೆಯಿಂದ ಬರ ಪರಿಸ್ಥಿತಿ ಆವರಿಸಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ