Karnataka Dam Water Level: ಸೆ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

|

Updated on: Sep 15, 2023 | 6:33 AM

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 15ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಜಲಾಶಯ
Follow us on

ರಾಜ್ಯದ 195 ತಾಲೂಕುಗಳಲ್ಲಿ ಬರ ಆವರಿಸಿದೆ ರಾಜ್ಯ ಸರ್ಕಾರ ತಿಳಿಸಿದೆ. ಬರದ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇನ್ನು ಇಂದು (ಸೆ.15) ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಸೆಪ್ಟೆಂಬರ್​​​ 14 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 114.41 120.42 6053 405
ತುಂಗಭದ್ರಾ ಜಲಾಶಯ (Tungabhadra Dam) 497.71 105.79 67.08 104.46 1895 10304
ಮಲಪ್ರಭಾ ಜಲಾಶಯ (Malaprabha Dam) 633.80 37.73 21.55 37.73 0 194
ಕೆ.ಆರ್.ಎಸ್ (KRS Dam) 38.04 49.45 20.93 49.20 2985 4742
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 66.54 142.75 2211 6554
ಕಬಿನಿ ಜಲಾಶಯ (Kabini Dam) 696.13 19.52 14.92 18.87 4229 3490
ಭದ್ರಾ ಜಲಾಶಯ (Bhadra Dam) 657.73 71.54 44.03 70.38 431 2491
ಘಟಪ್ರಭಾ ಜಲಾಶಯ (Ghataprabha Dam) 662.91 51.00 41.95 50.76 1172 184
ಹೇಮಾವತಿ ಜಲಾಶಯ (Hemavathi Dam) 890.58 37.10 18.56 36.91 807 6050
ವರಾಹಿ ಜಲಾಶಯ (Varahi Dam) 594.36 31.10 9.72 22.84 467 0
ಹಾರಂಗಿ ಜಲಾಶಯ (Harangi Dam)​​ 871.38 8.50 8.29 8.17 1302 1818
ಸೂಫಾ (Supa Dam) 564.00 145.33 77.56 100.85 2565 3603

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುತ್ತದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮನಾ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ