Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳು ಖಾಲಿ-ಖಾಲಿ: ಇಲ್ಲಿದೆ ಸೆ.21ರ ಡ್ಯಾಂಗಳ ನೀರಿನ ಮಟ್ಟ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 21ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳು ಖಾಲಿ-ಖಾಲಿ: ಇಲ್ಲಿದೆ ಸೆ.21ರ ಡ್ಯಾಂಗಳ ನೀರಿನ ಮಟ್ಟ
ಹಾರಂಗಿ ಡ್ಯಾಂ
Follow us
ಆಯೇಷಾ ಬಾನು
|

Updated on:Sep 21, 2023 | 6:49 AM

ಸರಿಯಾದ ಸಮಯಕ್ಕೆ ಮಳೆ ಬರದ ಹಿನ್ನೆಲೆ ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ನೀರಿಲ್ಲ. ಅದರಲ್ಲೂ ತಮಿಳುನಾಡಿಗೆ ಕಾವೇರಿ ಹರಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರ ಎದುರಿಸುವ ನಿರೀಕ್ಷೆ ಹೆಚ್ಚಾಗಿದೆ. ಕಾವೇರಿಕೊಳ್ಳದ ಪ್ರಮುಖ ಜಲಾಶಯ ಹೇಮಾವತಿಯಲ್ಲಿ ನೀರಿನ ಸಂಘ್ರಹ ಸಂಪೂರ್ಣವಾಗಿ ಕುಸಿದು ಹೋಗಿದ್ದು ಐವತ್ತು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ನೀರಿನ ಸಂಗ್ರಹ ಸೆಪ್ಟೆಂಬರ್ ನಲ್ಲಿದೆ. ಇದರಿಂದ ರೈತರು ಚಿಂತೆಗೆ ಬಿದ್ದಿದ್ದಾರೆ. ಇನ್ನು ಕಾವೇರಿ ತವರು ಕೊಡಗಿನಲ್ಲೂ ರೈತರು ಆತಂಕಕ್ಕೊಳಗಾಗಿದ್ದಾರೆ. ಹಾರಂಗಿ ಜಲಾಶಯದಲ್ಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಜಲಾಶಯಕ್ಕೆ ಒಳಹರಿವು ಶೇಕಡಾ 40 ರಷ್ಟು ಕಡಿಮೆಯಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಲ್ಲೂ ಕೂಡ ನೀರು ಕಡಿಮೆಯಾಗುತ್ತಿದೆ. ಹಾಗಾದರೆ ಸೆಪ್ಟೆಂಬರ್​​​ 21 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 114.73 120.59 405 405
ತುಂಗಭದ್ರಾ ಜಲಾಶಯ (Tungabhadra Dam) 497.71 105.79 62.92 105.79 4378 10316
ಮಲಪ್ರಭಾ ಜಲಾಶಯ (Malaprabha Dam) 633.80 37.73 21.44 37.73 0 194
ಕೆ.ಆರ್.ಎಸ್ (KRS Dam) 38.04 49.45 20.61 48.92 6016 5735
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.30 143.92 5493 5393
ಕಬಿನಿ ಜಲಾಶಯ (Kabini Dam) 696.13 19.52 14.80 18.85 3166 4390
ಭದ್ರಾ ಜಲಾಶಯ (Bhadra Dam) 657.73 71.54 43.23 70.23 290 290
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.40 51.00 2311 181
ಹೇಮಾವತಿ ಜಲಾಶಯ (Hemavathi Dam) 890.58 37.10 17.66 37.07 4986 1300
ವರಾಹಿ ಜಲಾಶಯ (Varahi Dam) 594.36 31.10 10.43 23.43 964 0
ಹಾರಂಗಿ ಜಲಾಶಯ (Harangi Dam)​​ 871.38 8.50 8.06 8.11 1335 2791
ಸೂಫಾ (Supa Dam) 564.00 145.33 77.85 105.25 3381 2343

KRS ಜಲಾಶಯ ರಾಜ್ಯದ ಜನರ ಜೀವನಾಡಿ. ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಲವು ನಗರಗಳಿಗೆ ಕುಡಿಯುವ ನೀರನ್ನ ಓದಗಿಸುವ ಜಲಾಶಯ. ಆದರೆ ಈ ಬಾರಿ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯ ಭರ್ತಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರನ್ನ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಮಾಡಿದೆ. ಆದೇಶಕ್ಕೆ ಮಣಿದು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಸಹಾ ಹರಿಸುತ್ತಿದೆ. ಇದರಿಂದ ಜಲಾಶಯ ಸಂಪೂರ್ಣವಾಗಿ ಬರಿದಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರಮುಖ ನಗರಗಳಿಗೆ ಜಲಕ್ಷಾಮ ಎದುರಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:43 am, Thu, 21 September 23

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ