Karnataka Dam Water Level: ಸೆ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

| Updated By: ಆಯೇಷಾ ಬಾನು

Updated on: Sep 27, 2023 | 7:13 AM

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 27ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ವರಾಹಿ ಡ್ಯಾಂ
Follow us on

ರಾಜ್ಯದಲ್ಲಿ ಈ ಬಾರಿ ನಿರೀಕ್ಷೆ ಮಟ್ಟದಲ್ಲಿ ಮಳೆ ಆಗದೆ ಬರದ ಛಾಯೆ ಆವರಿಸಿದೆ (Karnataka Rains). ವ್ಯವಸಾಯ ಮಾಡಲಾಗದೆ ರೈತರು ಕಂಗಾಲಾಗಿದ್ದರೆ. ದನ-ಕರುಗಳಿಗೂ ಮೇವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಜಲ ಕ್ಷಾಮ ಎದುರಾಗುವ ಭೀತಿ ಎದುರಾಗಿದೆ. ಹಾಗಾದರೆ ಸೆಪ್ಟೆಂಬರ್​​​ 27 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 109.13 123.08 1791 23516
ತುಂಗಭದ್ರಾ ಜಲಾಶಯ (Tungabhadra Dam) 497.71 105.79 59.53 105.78 1524 9829
ಮಲಪ್ರಭಾ ಜಲಾಶಯ (Malaprabha Dam) 633.80 37.73 21.06 37.73 0 1019
ಕೆ.ಆರ್.ಎಸ್ (KRS Dam) 38.04 49.45 20.41 48.34 7134 6201
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.91 412.58 4059 3925
ಕಬಿನಿ ಜಲಾಶಯ (Kabini Dam) 696.13 19.52 13.64 18.81 2384 4390
ಭದ್ರಾ ಜಲಾಶಯ (Bhadra Dam) 657.73 71.54 43.38 71.54 61 710
ಘಟಪ್ರಭಾ ಜಲಾಶಯ (Ghataprabha Dam) 662.91 51.00 43.38 51.00 1049 176
ಹೇಮಾವತಿ ಜಲಾಶಯ (Hemavathi Dam) 890.58 37.10 18.33 37.06 2965 1300
ವರಾಹಿ ಜಲಾಶಯ (Varahi Dam) 594.36 31.10 10.74 23.37 487 0
ಹಾರಂಗಿ ಜಲಾಶಯ (Harangi Dam)​​ 871.38 8.50 7.12 7.93 835 2800
ಸೂಫಾ (Supa Dam) 564.00 145.33 76.96 105.47 3073 4792

ಕಾವೇರಿ ನೀರಿಗಾಗಿ ಕನ್ನಡಿಗರು ಹೋರಾಟ ನಡೆಸುತ್ತಿರೋವಾಗಲೇ ಕರ್ನಾಟಕಕ್ಕೆ ಮತ್ತೊಂದು ಶಾಕ್ ಸಿಕ್ಕಿದೆ. ದೆಹಲಿಯ ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ನಡೆದಿದ್ದು ತಮಿಳುನಾಡಿಗೆ ಮತ್ತೆ 18 ದಿನ ನೀರು ಹರಿಸುವಂತೆ CWRC ಆದೇಶ ನೀಡಿದೆ. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ